ಮಂಗಳೂರು: ನಗರದ ವಾಮಂಜೂರಿನ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಇಸಿ) 2021-22ರ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ ವಿಶ್ವವಿದ್ಯಾಲಯ ಧನ ಸಹಾಯಕ ಆಯೋಗವು ಸ್ವಾಯತ್ತ ಸ್ಥಾನಮಾನ ನೀಡಿದೆ ಎಂದು ಪ್ರಾಂಶುಪಾಲ ಡಾ. ರಿಯೊ ಡಿಸೋಜ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಕಾಲೇಜಿಗೆ 2018ರ ಸ್ವಾಯತ್ತ ಕಾಲೇಜುಗಳ ಯೋಜನೆಯಡಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) 2019 ರಲ್ಲಿ ಸ್ವಾಯತ್ತತೆ ನೀಡಿತ್ತು’ ಎಂದರು.

ಇದನ್ನು ಇತ್ತೀಚೆಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮುಂಬರುವ ಶೈಕ್ಷಣಿಕ ವರ್ಷದಿಂದ 9 ವರ್ಷಗಳ ಅವಧಿಗೆ ಅನುಮೋದಿಸಿದೆ. ಯುಜಿಸಿ ತಜ್ಞರ ತಂಡವು 2020ರ ನವೆಂಬರ್ನಲ್ಲಿ ಕಾಲೇಜಿಗೆ ಭೇಟಿ ನೀಡಿ ಪರೀಕ್ಷಿಸಿತ್ತು. ರಾಜ್ಯದ ಬೆರಳೆಣಿಕೆಯಷ್ಟು ಎಂಜಿನಿಯರಿಂಗ್ ಕಾಲೇಜುಗಳು ಮಾತ್ರ ಸ್ವಾಯತ್ತ ಸ್ಥಾನಮಾನ ಪಡೆದಿರುವುದು ಕಾಲೇಜಿನ ವಿಶ್ವಾಸಾರ್ಹತೆ ಹೆಚ್ಚಿಸಿದೆ ಎಂದು ತಿಳಿಸಿದರು.

‘ಕಾಲೇಜು ತನ್ನ ಎಲ್ಲ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಬದ್ಧವಾಗಿದೆ. ಸ್ವಾಯತ್ತ ಸಂಸ್ಥೆಯ ಸ್ಥಾನಮಾನ ಪಡೆದಿರುವುದು ಈ ಸಂಗತಿಗೆ ಮತ್ತಷ್ಟು ಪುಷ್ಟಿಯನ್ನು ನೀಡಿದೆ. ಫಲಿತಾಂಶ-ಆಧಾರಿತ ಶಿಕ್ಷಣ(ಒಬಿಇ) ದಿಂದಾಗಿ ಎಸ್ಜೆಇಸಿ ಈಗಾಗಲೇ ನ್ಯಾಷನಲ್ ಬೋರ್ಡ್ ಆಫ್ ಅಕ್ರೆಡಿಟೇಶನ್ (ಎನ್ಬಿಎ)ಯಿಂದ ನಾಲ್ಕು ಬಿ.ಇ. ಕೋರ್ಸ್ಗಳಿಗೆ ಮಾನ್ಯತೆ ಪಡೆದಿದೆ. ಈ ವರ್ಷದ ಫೆಬ್ರುವರಿಯಲ್ಲಿ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (ನ್ಯಾಕ್) ನಿಂದ ಎ+ ಮಾನ್ಯತೆನ್ನು ಪಡೆದಿದೆ’ ಎಂದು ಹೇಳಿದರು.

ಸ್ವಚ್ಛ, ಹಸಿರು ಮತ್ತು ಸ್ಮಾರ್ಟ್ ಕ್ಯಾಂಪಸ್ನಿಂದಾಗಿ ಕರಾವಳಿ ಪ್ರದೇಶದ ಎಂಜಿನಿಯರಿಂಗ್ ಆಕಾಂಕ್ಷಿಗಳ ನೆಚ್ಚಿನ ಶಿಕ್ಷಣ ತಾಣವಾಗಿದೆ. ಉತ್ತಮ ಮೂಲಸೌಕರ್ಯ, ಶೈಕ್ಷಣಿಕ ವಾತಾವರಣ, ಶಿಸ್ತು, ಅತ್ಯುತ್ತಮ ಉದ್ಯೋಗಾವಕಾಶಗಳು, ಇನ್ಕ್ಯುಬೇಷನ್ ಸೌಲಭ್ಯಗಳು, ಉದ್ಯಮಶೀಲತೆ ಮತ್ತು ನಾವೀನ್ಯಕ್ಕೆ ಬೆಂಬಲ, ಸಮರ್ಥ ಅಧ್ಯಾಪಕರು ಮತ್ತು ತಾಂತ್ರಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ನೀಡುವ ಪ್ರೋತ್ಸಾಹಕ್ಕೆ ಆಕರ್ಷಿತರಾಗಿದ್ದಾರೆ’ ಎಂದು ವಿವರಿಸಿದರು.

ಕಾಲೇಜಿನ ನಿರ್ದೇಶಕ ರೆ.ವಿಲ್ಫ್ರೆಡ್ ಪ್ರಕಾಶ್ ಡಿಸೋಜ, ಉಪನಿರ್ದೇಶಕರಾದ ರೆ. ರೋಹಿತ್ ಡಿಕೋಸ್ತ ಮತ್ತು ರೆ.ಆಲ್ವಿನ್ ರಿಚರ್ಡ್ ಡಿಸೋಜ, ಮಾನವ ಸಂಪನ್ಮೂಲ ವ್ಯವಸ್ಥಾಪಕ ರಾಕೇಶ್ ಲೋಬೊ, ಐಕ್ಯೂಎಸಿ ಸಂಯೋಜಕ ಡಾ. ಶ್ರೀರಂಗ ಭಟ್, ಭೌತವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ವಿನ್ಸೆಂಟ್ ಕ್ರಾಸ್ತಾ, ಗಣಿತ ವಿಭಾಗದ ಮುಖ್ಯಸ್ಥ ಡಾ. ರಮಾನಂದ ಎಚ್.ಎಸ್., ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಬಿನು ಕೆ.ಜಿ. ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.