ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಹಿ ಹಂಚಿ ಖುಷಿಪಟ್ಟ ಬಿಜೆಪಿ ಕಾರ್ಯಕರ್ತರು

ಮೂರನೇ ಸಲ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ
Published 10 ಜೂನ್ 2024, 4:10 IST
Last Updated 10 ಜೂನ್ 2024, 4:10 IST
ಅಕ್ಷರ ಗಾತ್ರ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಸಲ ಪ್ರಧಾನಿಯಾಗಿ ನವದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ನಗರದಲ್ಲೂ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು.

ಕೇಂದ್ರ ಸಂಪುಟದ ಪ್ರಮಾಣ ವಚನ ಸಮಾರಂಭವನ್ನು ನೇರ ಪ್ರಸಾರ ಮಾಡಲು ಇಲ್ಲಿನ ಪಿವಿಎಸ್‌ ವೃತ್ತದ ಬಳಿಯ ಬಿಜೆಪಿ ಕಚೇರಿ ಎದುರು ಚಪ್ಪರ ಹಾಕಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ಅಪೂರ್ವ  ದೃಶ್ಯಗಳನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ನೂರಾರು ಮಂದಿ ದೊಡ್ಡ ಪರದೆಯಲ್ಲಿ ವೀಕ್ಷಿಸಿದರು. ಮೋದಿ ಅವರು ಪರದೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಅವರ ಪರ  ಜೈಕಾರ ಮುಗಿಲು ಮುಟ್ಟಿತು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ಕುಂಪಲ, ಶಾಸಕ ಡಿ.ವೇದವ್ಯಾಸ ಕಾಮತ್‌, ಮೇಯರ್‌ ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ, ಮುಖಂಡರಾದ ರಮೇಶ್ ಕಂಡೆಟ್ಟು, ಜಗದೀಶ ಶೇಣವ, ಶಕೀಲಾ ಕಾವ ಮೊದಲಾದವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT