ಮಂಗಳೂರು: ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಮೂಲಕ ಉಡುಪಿಗೆ ತೆರಳಿದರು.

ನವದೆಹಲಿಯಿಂದ ವಾಯು ಪಡೆಯ ವಿಮಾನದ ಮೂಲಕ 10.25ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ರಾಜ್ಯ ಸರ್ಕಾರದ ಪರವಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು ಪ್ರಧಾನಿಗಳನ್ನು ಸ್ವಾಗತಿಸಿದರು.

ನಂತರ ವಾಯುಪಡೆಯ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಉಡುಪಿಗೆ ತೆರಳಿದರು. ಉಡುಪಿ ಕಾರ್ಯಕ್ರಮ ಮುಗಿಸಿ, ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ಮೂಲಕ ಬರುವ ಪ್ರಧಾನಿ, ಇಲ್ಲಿಂದ ಗೋವಾಕ್ಕೆ ತೆರಳಲಿದ್ದಾರೆ.