ಮಂಗಳೂರು: ಪತ್ನಿಗೆ ಕಿರುಕುಳ ಹಾಗೂ ಕೊಲೆಯತ್ನ ಆರೋಪ ಎದುರಿಸುತ್ತಿರುವ ಕೆಎಎಸ್ ಅಧಿಕಾರಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಯಾರ ಸಂಪರ್ಕಕ್ಕೂ ಸಿಗದಿದ್ದು, ನಾಪತ್ತೆಯಾಗಿದ್ದರೆ ಎನ್ನಲಾಗಿದೆ.

ಅವರ ಪತ್ನಿ ಬೆಂಗಳೂರಿನಲ್ಲಿ ವಾಸವಿದ್ದ ಕಾರಣ, ಅವರು ಮಂಗಳೂರಿನ ಉರ್ವ ಮಾರುಕಟ್ಟೆ ಬಳಿಯ ಫ್ಲಾಟ್‌ವೊಂದರಲ್ಲಿ ಒಬ್ಬರೇ ವಾಸವಿದ್ದರು ಎಂದು ಹೇಳಲಾಗಿದೆ. ಪತ್ನಿ ದೀಪ್ತಿ ಬೆಂಗಳೂರಿನ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದರಿಂದ ದಿನೇಶ್ ಕುಮಾರ್ ದಿಢೀರ್ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಶುಕ್ರವಾರ ಕಚೇರಿಗೆ ಬಂದಿದ್ದ ದಿನೇಶ್ ಕುಮಾರ್, ರಾತ್ರಿ ಮನೆಗೆ ಬೀಗ ಹಾಕಿ ನಾಪತ್ತೆಯಾಗಿದ್ದಾರೆ. ಅವರ ಮೊಬೈಲ್, ಸ್ವಿಚ್ಡ್ ಆಫ್ ಎಂದು ಬರುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.