ಭಾನುವಾರ, ಆಗಸ್ಟ್ 18, 2019
25 °C

ದಕ್ಷಿಣ ಕನ್ನಡ: 79.4 ಮಿ.ಮೀ. ಮಳೆ

Published:
Updated:

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ತಾಸುಗಳಲ್ಲಿ 79.4 ಮಿಲಿ ಮೀಟರ್‌ ಮಳೆಯಾಗಿದೆ. ಶನಿವಾರ ಮಧ್ಯಾಹ್ನದಿಂದ ಮಳೆ ತಗ್ಗಿದ್ದು, ಮೋಡ ಕವಿದ ವಾತಾವರಣವಿದೆ.

ಬಂಟ್ವಾಳ ತಾಲ್ಲೂಕಿನಲ್ಲಿ ಅತ್ಯಧಿಕ 108.7 ಮಿ.ಮೀ. ಮಳೆ ಬಿದ್ದಿದೆ. ಮಂಗಳೂರು ನಗರ ಸೇರಿದಂತೆ ಮಂಗಳೂರು ತಾಲ್ಲೂಕಿನಲ್ಲಿ 96.8 ಮಿ.ಮೀ., ಸುಳ್ಯ ತಾಲ್ಲೂಕಿನಲ್ಲಿ 85 ಮಿ.ಮೀ., ಬೆಳ್ತಂಗಡಿ ತಾಲ್ಲೂಕಿನಲ್ಲಿ 63 ಮಿ.ಮೀ. ಮತ್ತು ಪುತ್ತೂರು ತಾಲ್ಲೂಕಿನಲ್ಲಿ 43.3 ಮಿ.ಮೀ. ಮಳೆಯಾಗಿದೆ. 2018ರ ಜುಲೈ 20ರಂದು ಜಿಲ್ಲೆಯಲ್ಲಿ 84.2 ಮಿ.ಮೀ. ಮಳೆಯಾಗಿತ್ತು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ವಿಪತ್ತು ನಿರ್ವಹಣಾ ಘಟಕ ತಿಳಿಸಿದೆ.

ವಾಡಿಕೆ ಪ್ರಕಾರ ಜಿಲ್ಲೆಯಲ್ಲಿ ಜುಲೈ 20ರ ವೇಳೆಗೆ 3,912.2 ಮಿ.ಮೀ ಮಳೆ ಬೀಳುತ್ತಿತ್ತು. ಕಳೆದ ವರ್ಷ ಈ ವೇಳೆಗೆ 2,690 ಮಿ.ಮೀ ಮಳೆ ಬಿದ್ದಿತ್ತು. ಈ ಬಾರಿ ಕೇವಲ 1,056.9 ಮಿ.ಮೀ ಮಳೆಯಾಗಿದೆ. ವಾಡಿಕೆಗೆ ಹೋಲಿಸಿದರೆ 2,855.3 ಮಿ.ಮೀ ಮತ್ತು ಕಳೆದ ವರ್ಷಕ್ಕೆ ಹೋಲಿಸಿದರೆ 1,633.1 ಮಿ.ಮೀ. ಮಳೆ ಕೊರತೆ ಉಂಟಾಗಿದೆ.

Post Comments (+)