ಮಂಗಳೂರು: ಮುಂಗಾರು ಪೂರ್ವ ಮಳೆ ಚುರುಕುಗೊಂಡಿದೆ. ಮಂಗಳೂರು ನಗರದಾದ್ಯಂತ ಶುಕ್ರವಾರ ರಾತ್ರಿಯಿಂದ ಬಿಡದೇ ಮಳೆ ಸುರಿಯುತ್ತಿದೆ.

ಶನಿವಾರವೂ ಉತ್ತಮ ಮಳೆಯಾಗುತ್ತಿದೆ. ಧಾರಾಕಾರ ಮಳೆಯಿಂದಾಗಿ ನಗರದ ತೆಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ.

ನಗರದ ಪಂಪ್ ವೆಲ್ ಬಳಿಯ ಸರ್ವಿಸ್ ರಸ್ತೆ, ಪಡೀಲ್ ಅಂಡರ್ ಪಾಸ್, ಕೊಟ್ಟಾರ ಚೌಕಿ, ಡೋಂಗರಕೆರೆ ಸೇರಿದಂತೆ ತೆಗ್ಗು ಪ್ರದೇಶದಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ರಾಜಕಾಲುವೆಗಳಲ್ಲಿಯೂ ನೀರು ಉಕ್ಕಿ ಹರಿಯುತ್ತಿತ್ತು.

ಉಡುಪಿ ಜಿಲ್ಲೆಯಲ್ಲೂ ಉತ್ತಮ ಮಳೆಯಾಗುತ್ತಿದ್ದು, ಕೆಲವೆಡೆ ಗಾಳಿ ಸಹಿತ ಮಳೆ ಸುರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.