ಮೂಡುಬಿದಿರೆ: ಪಿರಮಿಡ್ ಸ್ಪಿರಿಚುಯಲ್ ಸೊಸೈಟೀಸ್ ಮೂವ್ಮೆಂಟ್ (ಪಿಎಸ್ಎಸ್ಎಂ), ಬೆಂಗಳೂರಿನ ಪಿರಮಿಡ್ ವರ್ಲ್ಡ್ ಫೌಂಡೇಷನ್ ಹಾಗೂ ಆಳ್ವಾಸ್ ಎಜುಕೇಷನ್ ಫೌಂಡೇಷನ್ ಸಹಯೋಗದಲ್ಲಿ ನಾದ ಧ್ಯಾನ ಚಕ್ರ 8 ಕಾರ್ಯಕ್ರಮ ಮೇ 17ರಂದು ನಡೆಯಲಿದೆ.

ಆಳ್ವಾಸ್ ಕ್ಯಾಂಪಸ್ನಲ್ಲಿರುವ ಕೃಷಿ ಸಿರಿ ಸಭಾಂಗಣದಲ್ಲಿ ಬೆಳಿಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಶಿಬಿರ ನಡೆಯಲಿದೆ ಎಂದು ಧ್ಯಾನ ತರಬೇತುದಾರ ಡಾ.ಅಯ್ಯಪ್ಪ ಪಿಂಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬೆಳಿಗ್ಗೆ 8.30ಕ್ಕೆ ಉದ್ಘಾಟನೆ ನೆರವೇರಲಿದ್ದು, 9ರಿಂದ ಮಧ್ಯಾಹ್ನ 2ರವರೆಗೆ ಮೂರು ಗಂಟೆ ಧ್ಯಾನ, ಆನಾಪಾನಸತಿ ಧ್ಯಾನದ ಬಗ್ಗೆ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಶಿಬಿರದಲ್ಲಿ ಪಾಲ್ಗೊಳ್ಳುವವರಿಗೆ ಉಚಿತವಾಗಿ ಸಾತ್ವಿಕ ಭೋಜನದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಒತ್ತಡ ಮುಕ್ತ ಜೀವನ ಹಾಗೂ ಉತ್ತಮ ಆರೋಗ್ಯಕ್ಕಾಗಿ ಯೋಗ ಮತ್ತು ಧ್ಯಾನ ಅಗತ್ಯವಾಗಿದೆ. ಈ ಬಾರಿ ಸುಮಾರು 5 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಶಾಸ್ತ್ರೀಯ ನಾದದೊಂದಿಗಿನ ಧ್ಯಾನವು ಮಾನಸಿಕ ನೆಮ್ಮದಿಗೆ ಪೂರಕವಾಗಲಿದೆ ಎಂದು ಅವರು ವಿವರಿಸಿದರು. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದ್ದು, ಮಾಹಿತಿಗಾಗಿ ಆದಿಶಂಕರಾಚಾರ್ಯ ಹೀಲಿಂಗ್ ಪಿರಮಿಡ್ ಧ್ಯಾನ ಕೇಂದ್ರದ ಮೊ: 96112 68941 ಸಂಪರ್ಕಿಸಬಹುದು ಎಂದು ತಿಳಿಸಿದರು.

ರೇಖಾ ರವಿರಾಜ್ ಶೆಣೈ, ರೂಪಾ ಶಶಿಕಾಂತ್ ನಾಯಕ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-29-1884859675

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.