ಮೂಡುಬಿದಿರೆ: ದೇಶದಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ದ್ರೋಹವಾಗಿದೆ ಎಂದು ಕೆಪಿಸಿಸಿ ವಕ್ತಾರ ಪದ್ಮಪ್ರಸಾದ್ ಜೈನ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ನೀಟ್ ಪರೀಕ್ಷೆಗೆ ಶ್ರಮಪಟ್ಟ ವಿದ್ಯಾರ್ಥಿ ಸಮುದಾಯವನ್ನು ಅನಿಶ್ಚಿತತೆ ಮತ್ತು ಸಂಕಷ್ಟಕ್ಕೆ ತಳ್ಳಿದೆ. ಕೇಂದ್ರ ಸರ್ಕಾರದ ನೀತಿಯು ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ದಾಖಲಾತಿ ವಿಚಾರದಲ್ಲಿ ರಾಜ್ಯಗಳ ಅಧಿಕಾರವನ್ನು ಕಸಿದುಕೊಳ್ಳುತ್ತದೆ ಎಂದು ರಾಜ್ಯ ಸರ್ಕಾರ ಈ ಹಿಂದೆಯೆ ಆಕ್ಷೇಪ ವ್ಯಕ್ತಪಡಿಸಿ, ಸದನ ನಿರ್ಣಯ ಕೈಗೊಂಡಿತ್ತು. ಸಿಇಟಿ ಅತ್ಯುತ್ತಮವಾಗಿದ್ದು, ನೀಟ್ ಬೇಕಾಗಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದರು.

ಪ್ರಕರಣದ ಬಗ್ಗೆ ಕಾಲಮಿತಿಯ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಸಿಇಟಿ ಮಾದರಿಯಲ್ಲೇ ಪರೀಕ್ಷೆಗಳು ನಡೆಯಬೇಕು ಮತ್ತು ಅಂಥ ಪ್ರವೇಶ ಪರೀಕ್ಷೆಗಳನ್ನು ನಡೆಸುವ ರಾಜ್ಯಗಳ ಅಧಿಕಾರವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಕಾನೂನು ವಿಭಾಗದ ಅಧ್ಯಕ್ಷ ಮರ್ವಿನ್ ಲೋಬೊ, ಕೆಡಿಪಿ ಸದಸ್ಯ ತುಕ್ರಪ್ಪ ಕೆಂಬಾರೆ ಸುದ್ದಿಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.