ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾ.ಹೆ.ಯ ಬನ್ನಡ್ಕ ಎಂಬಲ್ಲಿ ಆಂಬುಲೆನ್ಸ್ ಮತ್ತು ಆಟೊ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೊ ಚಾಲಕ ಅಲಂಗಾರಿನ ಜಾನ್ ಕೊರೆಯಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬನ್ನಡ್ಕ ಮಠದಲ್ಲಿ ನಡೆಯುತ್ತಿದ್ದ ಸಮಾರಂಭವೊಂದಕ್ಕೆ ಪ್ರಯಾಣಿಕರನ್ನು ಬಿಟ್ಟು ಆಟೊವನ್ನು ಹಿಂದಕ್ಕೆ ತೆಗೆಯುತ್ತಿದ್ದಾಗ ಮೂಡುಬಿದಿರೆ ಕಡೆಯಿಂದ ಕಾರ್ಕಳಕ್ಕೆ ತೆರಳುತ್ತಿದ್ದ ಆಂಬುಲೆನ್ಸ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಆಟೊದ ಮೇಲ್ಭಾಗ ನಜ್ಜುಗುಜ್ಜಾಗಿದ್ದು, ಆಂಬುಲೆನ್ಸ್ ಮುಂಭಾಗ ಜಖಂಗೊಂಡಿದೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-29-1807658968

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.