ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಾಲ್ಕು ದಿನ ನಡೆದ ಬೆದ್ರ ಉತ್ಸವದ ಸಮರೋಪದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ..ಮೋಹನ ಆಳ್ವ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎಎನ್. ರಾಜೇಂದ್ರ ಕುಮಾರ್, ಅದಾನಿ ಸಮೂಹದ ಕಿಶೋರ್ ಆಳ್ವ ಅವರಿಗೆ ಬೆದ್ರ ಮಾಣಿಕ್ಯ ಪ್ರಶಸ್ತಿ ಪ್ರದನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಮೋಹನ ಆಳ್ವ, ‘ನನ್ನ ತಂದೆ ಮಿಜಾರು ಆನಂದ ಆಳ್ವ ಹೆಸರಿನ ವೇದಿಕೆಯಲ್ಲಿ ಪ್ರಶಸ್ತಿ ಸ್ವೀಕರಿಸಿರುವುದು ಸಂತೋಷ ನೀಡಿದೆ. ಬೆದ್ರ ಉತ್ಸವ ಪ್ರಥಮ ಬಾರಿ ನಡೆಯುತ್ತಿದ್ದು, ಪ್ರತಿ ವರ್ಷ ನಡೆಯುವಂತಾಗಲಿ’ ಎಂದರು.

ಎಂ.ಎನ್.ರಾಜೇಂದ್ರ ಕುಮಾರ್, ಕಿಶೋರ್ ಆಳ್ವ ಮಾತನಾಡಿದರು.

ವಕೀಲ ಶರತ್ ಶೆಟ್ಟಿ ಮಾತನಾಡಿ, ಆದಾನಿ ಸಂಸ್ಥೆಯಿಂದ ಹಲವರು ನೆಲೆ ಕಂಡುಕೊಂಡಿದ್ದಾರೆ. ಮೂಡುಬಿದಿರೆ ಯಲ್ಲೂ ಸಂಸ್ಥೆ ಆರಂಭಿಸಿ ಇಲ್ಲಿನ ಯುವಕರಿಗೆ ಉದ್ಯೋಗದ ಅವಕಾಶ ಕಲ್ಪಿ ಸುವಂತೆ ಕಿಶೋರ್ ಅವರಲ್ಲಿ ಕೋರಿದರು.

ಶಾಸಕ ಉಮಾನಾಥ ಎ.ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಎಂ.ಸಿ.ಎಸ್ ಬ್ಯಾಂಕ್ ಅಧ್ಯಕ್ಷ ಎಂ.ಬಾಹು ಬಲಿ ಪ್ರಸಾದ್, ವಿಶೇಷ ಕರ್ತವ್ಯಾಧಿಕಾರಿ ಚಂದ್ರಶೇಖರ ಎಂ., ಮುಖಂಡ ಕೆ.ಪಿ.ಜಗದೀಶ್ ಅಧಿಕಾರಿ, ರಂಜಿತ್ ಪೂಜಾರಿ, ಪುರಸಭೆ ಮಾಜಿ ಅಧ್ಯಕ್ಷರಾದ ಜಯಶ್ರೀ ಕೇಶವ್, ಪ್ರಸಾದ್ ಕುಮಾರ್, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಉದ್ಯಮಿಗಳಾದ ರಾಜೇಂದ್ರ ಕುಮಾರ್ ಜೈನ್, ಮಹೇಂದ್ರ ವರ್ಮ, ವಕೀಲ ಚೇತನ್ ಕುಮಾರ್ ಶೆಟ್ಟಿ, ಬೆದ್ರ ಉತ್ಸವ ಸಮಿತಿ ಉಪಾಧ್ಯಕ್ಷ ಸುದರ್ಶನ ಎಂ., ಸಂಚಾಲಕ ಹರೀಶ್ ದೇವಾಡಿಗ, ಕೋಶಾಧಿಕಾರಿ ನಾಗೇಶ್ ಬಂಗೇರ, ಲಕ್ಷ್ಮಣ್ ಪೂಜಾರಿ ಭಾಗವಹಿಸಿದ್ದರು. ಗೋಪಾಲ ಶೆಟ್ಟಿಗಾರ್ ನಿರೂಪಿಸಿ, ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-29-101569575

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.