ಮೂಡುಬಿದಿರೆ: ಕರಾವಳಿ ಕರ್ನಾಟಕದಲ್ಲಿ ನಾವು ಮಾಡುವ ಪ್ರತಿ ಕಾರ್ಯಕ್ರಮಗಳೂ ಉತ್ಸವದ ಸ್ವರೂಪ ಪಡೆದುಕೊಳ್ಳುವುದು ಇಲ್ಲಿನ ವಿಶೇಷತೆ. ಒಳ್ಳೆಯ ಕೆಲಸಕ್ಕೆ ಎಲ್ಲರೂ ಕೈಜೋಡಿಸುವ ಗುಣ ನಮ್ಮ ಹಿರಿಯರು ಬೆಳೆಸಿಕೊಂಡು ಬಂದ ಪರಂಪರೆಯಾಗಿದೆ. ಊರಿನ ಹಿರಿಮೆ ಹೆಚ್ಚಿಸಲು ಬೆದ್ರ ಉತ್ಸವದಂತಹ ಕಾರ್ಯಕ್ರಮಗಳು ಮಾದರಿಯಾಗಲಿ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.

ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಡೆಯಲಿರುವ ಮನರಂಜನಾ ಆಟಗಳು, ಆಹಾರ ಮಳಿಗೆಗಳು ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮ್ಮಿಲನದ ಬೆದ್ರ ಉತ್ಸವವನ್ನು ಶುಕ್ರವಾರ ರಾತ್ರಿ ಉದ್ಘಾಟಿಸಿ ಅವರು ಮಾತನಾಡಿದರು.

ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಬೆದ್ರ ಉತ್ಸವ ಎನ್ನುವುದು ಕೇವಲ ಆಚರಣೆಯಲ್ಲ, ಅದು ಇಲ್ಲಿನ ಸಾಂಸ್ಕೃತಿಕ ಚೌಕಟ್ಟುಗಳ ಪ್ರತೀಕವಾಗಿದೆ. ಜಾತಿ-ಮತ ಭೇದವಿಲ್ಲದೆ ಎಲ್ಲರೂ ಒಗ್ಗೂಡಿ ಈ ಹಬ್ಬವನ್ನು ಆಚರಿಸುತ್ತಿರುವುದು ಸಾಮರಸ್ಯದ ಸಂಕೇತವಾಗಿದೆ ಎಂದರು.

ಕಟಪಾಡಿ ದ್ವಾರಕಮಯಿ ಮಠದ ಸಾಯಿ ಈಶ್ವರ ಗುರೂಜಿ ಸಂದೇಶ ನೀಡಿ, ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ನಡೆಯುತ್ತಿದೆ. ಸಮಾಜದ ಹಿತಕ್ಕಾಗಿ ಕೆಲಸ ಮಾಡುವಾಗ ಭಗವಂತನ ಕೃಪೆ ಲಭಿಸುತ್ತದೆ. ಇನ್ನೊಬ್ಬರ ನೋವಿಗೆ ಸ್ಪಂದಿಸುವುದು ನಿಜವಾದ ಸಾಧನೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಉತ್ಸವ ಸಮಿತಿ ಉಪಾಧ್ಯಕ್ಷ ಸುದರ್ಶನ ಎಂ., ಉದ್ಯಮಿ ಅಬುಅಲಾ ಪುತ್ತಿಗೆ, ಕೊರಗಪ್ಪ, ತಿಮ್ಮಯ್ಯ ಶೆಟ್ಟಿ, ನಂದಕುಮಾರ್ ಕುಡ್ವ, ಜಗದೀಶ್ ಅಧಿಕಾರಿ, ಕೃಷ್ಣರಾಜ್ ಹೆಗ್ಡೆ, ನಾರಾಯಣ ಪಿ.ಎಂ., ಶ್ರೀಪತಿ ಭಟ್, ರಂಜಿತ್ ಪೂಜಾರಿ, ಮೇಘನಾದ್ ಶೆಟ್ಟಿ, ಸುಂದರ್ ಭೋವಿ, ವಕೀಲ ಮಯೂರಕೀರ್ತಿ, ಶಾಂತಿಪ್ರಸಾದ್ ಹೆಗ್ಡೆ, ತ್ರಿವೇಣಿ ಗಣೇಶ್ ಶೆಟ್ಟಿ, ರಾಜೇಶ್ ನಾಯ್ಕ್, ಆನಂದ ಪೂಜಾರಿ, ಸುರೇಶ್ ಕೋಟ್ಯಾನ್, ಪ್ರೆಸ್ ಕ್ಲಬ್ ಅಧ್ಯಕ್ಷ ಸೀತಾರಾಮ ಆಚಾರ್ಯ ಭಾಗವಹಿಸಿದ್ದರು.

ಬೆದ್ರ ಉತ್ಸವ ಸಮಿತಿ ಸಂಚಾಲಕ ಹರೀಶ್ ದೇವಾಡಿಗ, ಪ್ರಧಾನ ಕಾರ್ಯದರ್ಶಿ ಗೋಪಾಲ ಶೆಟ್ಟಿಗಾರ್, ಕೋಶಾಧಿಕಾರಿ ನಾಗೇಶ್ ಬಂಗೇರ ಪಾಲ್ಗೊಂಡಿದ್ದರು. ಗಣೇಶ್ ಅಳಿಯೂರು ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-29-1846340286

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.