ಮೂಡುಬಿದಿರೆ: ಇಲ್ಲಿಗೆ ಸಮೀಪದ ಬೆಳುವಾಯಿ ಬಳಿಯ ಬನ್ನಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಎಕ್ಸ್ಪ್ರೆಸ್ ಬಸ್ ಶನಿವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬಸ್ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಸಾಗುತ್ತಿತ್ತು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಮಧ್ಯಾಹ್ನ ನಂತರ ಹೆದ್ದಾರಿಯನ್ನು ಏಕಮುಖ ಸಂಚಾರಕ್ಕೆ ಬದಲಾಯಿಸಲಾಗಿತ್ತು. ಪಲ್ಟಿ ಹೊಡೆದ ಬಸ್ ಹತ್ತಿರದಲ್ಲಿದ್ದ ದ್ವಿಚಕ್ರ ವಾಹನಕ್ಕೂ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಜಿತೇಶ್ ಎಂಬವರಿಗೆ ಗಂಭೀರ ಗಾಯವಾಗಿದೆ. ಇನ್ನು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಮತ್ತು ಸರಿಯಾದ ಸೂಚನಾ ಫಲಕಗಳನ್ನು ಅಳವಡಿಸದೆ ಇರುವುದು ಈ ಪ್ರದೇಶದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.