ಮೂಡುಬಿದಿರೆ: ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಜಾನುವಾರುಗಳನ್ನು ಪಿಕಪ್ ವಾಹನದಲ್ಲಿ ಅಕ್ರಮವಾಗಿ ತುಂಬಿಸಿಕೊಂಡು ಬರುತ್ತಿದ್ದ ಆರೊಪದ ಮೇಲೆ ಕಾರ್ಕಳದ ಜಾಕ್ವೆಲಿನ್ ಮತ್ತು ಜಾಕ್ಸನ್ ಎಂಬುವರನ್ನು ಮೂಡುಬಿದಿರೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಪಿಕಪ್ ವಾಹನದಲ್ಲಿ ಎರಡು ಕೋಣ ಮತ್ತು ಒಂದು ಕರುವನ್ನು ಸಾಗಿಸುತ್ತಿರುವ ಬಗ್ಗೆ ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಆಲಂಗಾರು ಬಳಿ ವಾಹನವನ್ನು ತಡೆದ ಪೊಲೀಸರು ಜಾನುವಾರುಗಳನ್ನು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ನೆಲ್ಲಿಕಾರಿನ ಆಲ್ ಬದ್ರಿಯಾ ಚಿಕನ್ ಸ್ಟಾಲ್ನಲ್ಲಿ ಅನಧಿಕೃತವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಅಂಗಡಿ ಮಾಲೀಕ ಅಬೂಬಕ್ರ ಎಂಬಾತನನ್ನು ಬಂಧಿಸಿ, ಅಂಗಡಿಯಲ್ಲಿ ದಾಸ್ತಾನಿರಿಸಿದ್ದ 2 ಕೆ.ಜಿ ದನದ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ರಾಜೇಂದ್ರ ಅವರ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-29-49016893

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.