ಮೂಡುಬಿದಿರೆ: ರೈತರ ಹಾಗೂ ಹೈನುಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ಮೂಡುಬಿದಿರೆಯಲ್ಲಿ ರೈತರ ಪ್ರತಿಭಟನಾ ಜಾಥಾ ನಡೆಯಿತು.

ಹಸು ಹಾಗೂ ಹಾಲಿನ ಕ್ಯಾನ್ನೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೂಲಿಯಾಳುಗಳ ಸಮಸ್ಯೆಯಿಂದ ಹೈನುಗಾರಿಕೆ ಸಂಕಷ್ಟದಲ್ಲಿದೆ. ಹಾಲಿನ ದರವನ್ನು ಪ್ರತಿ ಲೀಟರ್ಗೆ ₹100ಕ್ಕೆ ಹೆಚ್ಚಿಸಬೇಕು. ಸರ್ಕಾರ ₹15 ಪ್ರೋತ್ಸಾಹಧನ ನೀಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಬಾಕಿ ಇರುವ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಕುಮ್ಕಿ ಭೂಮಿ ಹಕ್ಕನ್ನು ರೈತರಿಗೆ ನೀಡಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಭಾರತೀಯ ಕಿಸಾನ್ ಸಂಘದ ಮುಖಂಡ ಶಾಂತಿ ಪ್ರಸಾದ್ ಹೆಗ್ಡೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಅಧಿಕ ಅಕ್ರಮ-ಸಕ್ರಮ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ತೇಗದ ಮರ, ಹಲಸು, ಹೆಬ್ಬಲಸು ಸೇರಿದಂತೆ ಹೆದ್ದಾರಿ ಬದಿಯ ಮರಗಳನ್ನು ದೇವಸ್ಥಾನದ ಹೆಸರಿನಲ್ಲಿ ಕೆಲವು ಗುತ್ತಿಗೆದಾರರು ಬೇರೆ ಕಡೆಗೆ ಸಾಗಿಸುತ್ತಿದ್ದಾರೆ. ಮೂಡುಬಿದಿರೆಯಲ್ಲಿ ಕುಮ್ಕಿ ಹಕ್ಕುಗಳ ಬಗ್ಗೆ ಹಾಗೂ ನಾಡಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಆಗಸ್ಟ್ ತಿಂಗಳಲ್ಲಿ 12 ಗ್ರಾಮ ಪಂಚಾಯಿತಿ ಮುಂದೆ ಸಾವಿರಾರು ರೈತರನ್ನು ಸೇರಿಸಿ ಹೋರಾಟ ನಡೆಸಲಾಗುವುದು ಎಂದರು.

ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಭಂಡಾರಿ, ತಾಲ್ಲೂಕು ಘಟಕದ ಕಾರ್ಯದರ್ಶಿ ವಸಂತ್ ಭಟ್ ಪಯ್ಯಾಡಿ, ಕಿಸಾನ್ ಪ್ರಮುಖರಾದ ಜಾಯ್ಲಸ್ ಡಿಸೋಜ, ಮಾರ್ಪಾಡಿ ಗ್ರಾಮ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ, ಕಡಂದಲೆ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕೋಟ್ಯಾನ್, ತೆಂಕಮಿಜಾರು ಸಂಘದ ಪ್ರಮುಖರಾದ ನೇಮಿರಾಜ್ ಶೆಟ್ಟಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-29-883405199

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.