ಮೂಡುಬಿದಿರೆ: ಹೊಸಬೆಟ್ಟು ಗ್ರಾಮದ ಪುಚ್ಚೆಮೊಗರು ಬಾವದಬೈಲು ಪ್ರದೇಶದಲ್ಲಿ ಬುಧವಾರ ದೈವ ಭಂಡಾರವನ್ನು ಮೆರವಣಿಗೆಯಲ್ಲಿ ಒಯ್ಯುತ್ತಿದ್ದಾಗ ಕಾಲುಸಂಕ ಮುರಿದು ಬಿದ್ದು ಪರಿಣಾಮ ದೈವದ ಮುಕ್ಕಾಲ್ದಿ ಸಹಿತ ಎಂಟು ಮಂದಿ ಗಾಯಗೊಂಡಿದ್ದಾರೆ.

ಬಾವದಗುತ್ತಿನಲ್ಲಿ ಧರ್ಮ ನೇಮಕ್ಕೆ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗುತ್ತಿದ್ದಾಗ ಕಾಲು ಸಂಕ ಮುರಿದಿದೆ.

ಹರೀಶ್ ಎಂಬವರ ಎರಡು ಕಾಲು ಮುರಿದಿವೆ. ದೈವದ ಮುಕ್ಕಾಲ್ದಿ ಸುನಿಲ್ ಶೆಟ್ಟಿ ಅವರ ಸೊಂಟ ಮತ್ತು ಕಾಲಿಗೆ ಗಾಯವಾಗಿದೆ. ಉಳಿದಂತೆ ರಾಜೇಶ್, ಯಶೋಧರ್, ಅಶೋಕ್, ದಿನೇಶ್, ಪ್ರವೀಣ್ ಶೆಟ್ಟಿ, ಲೋಕೆಶ್, ಉದಯ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಸುನಿಲ್ ಶೆಟ್ಟಿ ಸಹಿತ ನಾಲ್ವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಮೂಡುಬಿದಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಂಬು, ಬ್ಯಾಂಡ್ ವಾದ್ಯಗಳ ತಂಡ ಸಂಕ ದಾಟಿದ ನಂತರ ಅವರನ್ನು ಹಿಂಬಾಲಿಸಿ ಭಂಡಾರವಿದ್ದ ಪಲ್ಲಕ್ಕಿಯನ್ನು ಹಿಡಿದುಕೊಂಡವರು ಕಾಲು ಸಂಕ ದಾಟುತ್ತಿದ್ದಾಗ ಕಾಲು ಸಂಕ ಮುರಿದುಬಿದ್ದು ಸುಮಾರು 10 ಅಡಿ ಆಳದ ತೋಡಿಗೆ ಬಿದ್ದಾರೆನ್ನಲಾಗಿದೆ.

ಘಟನೆ ತಿಳಿದ ಕೂಡಲೇ ಸ್ಥಳೀಯರು ತಕ್ಷಣ ಧಾವಿಸಿ ಗಾಯಾಳುಗಳನ್ನು ರಕ್ಷಿಸಿ, ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುಮಾರು 50 ವರ್ಷದ ಹಳೆಯ ಸೇತುವೆ ಇದಾಗಿದ್ದು ಶಿಥಿಲಾವಸ್ಥೆಯಲ್ಲಿತ್ತು ಎನ್ನಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-29-421217693

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.