ಮೂಡುಬಿದಿರೆ: ತಾಲ್ಲೂಕಿಗೆ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ಸ್ಥಾಪಿಸಬೇಕು. ಖಾಸಗಿ ಆಸ್ಪತ್ರೆಗಳೊಂದಿಗಿನ ಒಪ್ಪಂದವನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಸಿಪಿಎಂ ನೇತೃತ್ವದಲ್ಲಿ ಮಂಗಳವಾರ ಇಲ್ಲಿನ ಆಡಳಿತ ಸೌಧದ ಮುಂಭಾಗ ಧರಣಿ ನಡೆಯಿತು.

ಸಿಪಿಎಂ ಜಿಲ್ಲಾ ಘಟಕದ ಕಾರ್ಯ ದರ್ಶಿ ಮುನೀರ್ ಕಾಟಿಪಳ್ಳ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಯ ಸುಪರ್ದಿಗೆ ನೀಡುವುದಾದರೆ ಆರೋಗ್ಯ ಇಲಾಖೆ ಯಾಕೆ? ಅದಕ್ಕೊಂದು ಸಚಿವರು ಇರುವುದು ಯಾಕೆ? ಎಂದು ಪ್ರಶ್ನಿಸಿದರು.

ಮೂಡುಬಿದಿರೆ ತಾಲ್ಲೂಕು ಘೋಷಣೆಯಾಗಿ ಐದು ವರ್ಷ ಕಳೆದಿದ್ದರೂ, ಸುಸಜ್ಜಿತ ಸರ್ಕಾರಿ ಆಸ್ಪತ್ರೆಯ ಕೊರತೆ ಎದ್ದು ಕಾಣುತ್ತಿದೆ. ತಾಲ್ಲೂಕು ಕೇಂದ್ರಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯಗಳು, ಜನರಿಗೆ ಸಿಗಬೇಕಾದರೆ ಆರೋಗ್ಯ ಸೇವೆಯೂ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಗಮನಹರಿಸಿ ತಾಲ್ಲೂಕು ಮಟ್ಟದ ಆಸ್ಪತ್ರೆಯನ್ನು ಮಂಜೂರು ಮಾಡಬೇಕು. ಖಾಸಗಿಯವರಿಗೆ ಸರ್ಕಾರಿ ಆಸ್ಪತ್ರೆಯ ಜವಾಬ್ದಾರಿ ಕೊಡುವುದನ್ನು ನಿಲ್ಲಿಸಬೇಕು ಎಂದರು.

ಸಿಪಿಎಂ ನಾಯಕ ಯಾದವ ಶೆಟ್ಟಿ ಮಾತನಾಡಿ, ಮೂಡುಬಿದಿರೆ ತಾಲ್ಲೂಕಾಗಿದ್ದರೂ ಜನರಿಗೆ ಮೂಲಭೂತ ಆರೋಗ್ಯ ಸೇವೆಗಳೇ ದೊರೆಯುತ್ತಿಲ್ಲ. ಸರ್ಕಾರ ತಕ್ಷಣ ಕ್ರಮ ಕೈಗೊಂಡು ಮುಂದಿನ ಬಜೆಟ್ನಲ್ಲಿ ಸಂಪೂರ್ಣ ಸೌಲಭ್ಯಗಳೊಂದಿಗೆ ಸರ್ಕಾರಿ ಆಸ್ಪತ್ರೆ ಘೋಷಿಸಬೇಕು ಎಂದು ಒತ್ತಾಯಿಸಿದರು.

ತಾಲ್ಲೂಕು ಸಮಿತಿ ಕಾರ್ಯದರ್ಶಿ ರಮಣಿ, ಜಿಲ್ಲಾ ಘಟದಕ ಕಾರ್ಯದರ್ಶಿ ಮಂಡಳಿ ಸದಸ್ಯ ವಸಂತ ಆಚಾರಿ, ಸದಸ್ಯೆ ರಾಧಾ, ಸಮಿತಿ ಸದಸ್ಯರಾದ ಗಿರಿಜಾ, ಶಂಕರ, ಲಕ್ಷ್ಮೀ, ಆದಿವಾಸಿ ಬುಡಕಟ್ಟು ಸಮುದಾಯದ ಅಧ್ಯಕ್ಷ ಕರಿಯ, ಮುಖಂಡ ಕೃಷ್ಣಪ್ಪ ಕೊಣಾಜೆ, ವಿವಿಧ ವಿಭಾಗಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಇದಕ್ಕೂ ಮೊದಲು ಹಳೆ ಪೊಲೀಸ್ ಠಾಣಾ ಬಳಿಯಿಂದ ಮಿನಿ ವಿಧಾನ ಸೌಧದವರೆಗೆ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-29-1402297210

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.