ಮಂಗಳೂರು: ಮೂಡುಬಿದಿರೆ ತಾಲ್ಲೂಕಿನ ಕಡಂದಲೆ 400 ಕೆವಿ ವಿದ್ಯುತ್ ಉಪಕೇಂದ್ರದ ಕಾಮಗಾರಿಯನ್ನು ಜುಲೈ 15ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.

ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ಭೂವ್ಯಾಜ್ಯದಿಂದಾಗಿ 3 ವರ್ಷಗಳಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಅದನ್ನು ನಿವಾರಿಸಲಾಗಿದೆ. ಕಾಮಗಾರಿ ಆದಷ್ಟು ಶೀಘ್ರ ಮುಗಿಸಬೇಕು ಎಂದು ಇಂಧನ ಸಚಿವರು ಸೂಚನೆ ನೀಡಿದ್ದಾರೆ ಎಂದರು.

ಪ್ರಮುಖ ಕೈಗಾರಿಕಾ ಹಬ್ಗಳಾಗಿರುವ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ನಿರಂತರ ವಿದ್ಯುತ್ ಒದಗಿಸುವ ಪ್ರಮುಖ ಯೋಜನೆ ‘ವಿದ್ಯುತ್ ಸಂಜೀವಿನಿ’ಯ ಮೂಲಕ ಮಳೆಗಾಲದಲ್ಲಿ ಎದುರಾಗುತ್ತಿದ್ದ ವೋಲ್ಟೇಜ್ ವ್ಯತ್ಯಯ ಮತ್ತು ಕಡಿಮೆ ವೋಲ್ಟೇಜ್ ಸಮಸ್ಯೆಗೆ 400 ಕೆವಿ ಉಪಕೇಂದ್ರದಿಂದ ಶಾಶ್ವತ ಪರಿಹಾರ ಸಿಗಲಿದೆ. ಸ್ಟೇಷನ್ ವ್ಯಾಪ್ತಿಯಲ್ಲಿ ತಾಂತ್ರಿಕ ದೋಷ ಉಂಟಾದಾಗ ಉಪಕೇಂದ್ರದ ಮೂಲಕ ಪರ್ಯಾಯ ಲೋಡ್ ತೆಗೆದುಕೊಂಡು ತಕ್ಷಣ ವಿದ್ಯುತ್ ಮರುಸಂಪರ್ಕ ಕಲ್ಪಿಸುವುದು ಸುಲಭವಾಗಲಿದೆ ಎಂದು ಅವರು ಹೇಳಿದರು.

ಕಾಮಗಾರಿ ತ್ವರಿತವಾಗಿ ಮುಕ್ತಾಯಗೊಳಿಸುವುದಕ್ಕಾಗಿ ಹಾಲಿ ಇರುವ 400 ಕೆವಿ ಯುಪಿಸಿಎಲ್-ಹೆಬ್ಬನಹಳ್ಳಿ ಪ್ರಸರಣ ಮಾರ್ಗದ ಮೇಲೆ ಮೇ.24ರವರೆಗೆ ಮಾರ್ಗ ಮುಕ್ತತೆ (ಲೈನ್ ಕ್ಲಿಯರ್) ಪಡೆಯಲು ನಿಗಮ ನಿರ್ಧರಿಸಿದೆ. ಈ ಅವಧಿಯಲ್ಲಿ ವಿದ್ಯುತ್ ಬೇಡಿಕೆಗೆ ಅನುಗುಣವಾಗಿ ಪ್ರಸರಣ ಮಾರ್ಗದ ಮೇಲಿನ ಒತ್ತಡ ನಿಭಾಯಿಸಿ ಪರ್ಯಾಯ ವಿದ್ಯುತ್ ಪೂರೈಸಲಾಗುವುದು. ಎಂದು ಅವರು ವಿವರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-29-1922455998

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.