ಮೂಡುಬಿದಿರೆ: ತಾಲ್ಲೂಕಿನ ಮೂಡು ಬಿದಿರೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಬನ್ನಡ್ಕ ಪರಿಸರದಲ್ಲಿ ನಡೆಯುತ್ತಿರುವ ನಿರಂತರ ಅಪಘಾತ, ಉಂಟಾಗಿರುವ ಸಾವು– ನೋವಿನಿಂದ ಜನರಲ್ಲಿ ಆತಂಕ ಉಂಟಾಗಿದೆ. ಅಪಘಾತಗಳಿಗೆ ಕಾರಣ ಮತ್ತು ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಮಂಗಳೂರಿನ ಕುಲಶೇಖರದಿಂದ ಮೂಡುಬಿದಿರೆ- ಕಾರ್ಕಳ ನಡುವಿನ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ಮತ್ತು ಬೆಳುವಾಯಿಯಲ್ಲಿ ಅಪಘಾತಗಳು ನಡೆಯುತ್ತಲೇ ಇವೆ. 2021ರಲ್ಲಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಾರಂಭವಾಗುತ್ತಿದ್ದಂತೆ ಅಪಘಾತಗಳು ನಡೆಯಲಾರಂಭವಾಗಿತ್ತು. ಮೂರು ವರ್ಷಗಳಲ್ಲಿ ಸುಮಾರು 26 ವಾಹನ ಅಪಘಾತಗಳು ನಡೆದು ಹಲವರು ಮೃತಪಟ್ಟಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ ನಡೆದ 10 ಅಪಘಾತಗಳಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಈ ರಸ್ತೆಯಲ್ಲಿ ಸಂಭವಿಸುತ್ತಿರುವ ನಿರಂತರ ಅಪಘಾತಗಳು ಸ್ಥಳೀಯರಲ್ಲಿ ಭಯ ಮೂಡಿಸಿವೆ.

ರಾಷ್ಟ್ರೀಯ ಹೆದ್ದಾರಿ ಆರಂಭಿಸುವಾಗ ಎರಡೂ ಬದಿಯಲ್ಲಿ ಸರ್ವಿಸ್ ರಸ್ತೆ ನಿರ್ಮಿಸಬೇಕು ಎಂಬ ನಿಯಮ ಇದೆ. ಆದರೆ, ಬನ್ನಡ್ಕ ಪರಿಸರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗೆ ಸರ್ವಿಸ್ ರಸ್ತೆ ಇಲ್ಲ. ಈ ಪ್ರದೇಶದಲ್ಲಿ ಸುಮಾರು ಒಂದು ಸಾವಿರ ಮನೆಗಳಿವೆ. ಮಂಗಳೂರು ವಿವಿ ಘಟಕ ಕಾಲೇಜು, ಹತ್ತಿರದಲ್ಲಿ ಎರಡು ಕಾರ್ಖಾನೆಗಳು, ಬನ್ನಡ್ಕ ದೇವಸ್ಥಾನ, ಹಾಲಿನ ಡೇರಿ ಇದ್ದರೂ ಸರ್ವಿಸ್ ರಸ್ತೆಯನ್ನು ಇನ್ನೂ ನಿರ್ಮಿಸಿಲ್ಲ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಸರ್ವಿಸ್ ರಸ್ತೆ ನಿರ್ಮಾಣವಾಗದೆ ಇರುವುದು, ಫ್ಲೈ ಓವರ್ ವ್ಯವಸ್ಥೆ ಇಲ್ಲದೆ ಇರುವುದು ಕೂಡ ಅಪಘಾತ ಹೆಚ್ಚಳಕ್ಕೆ ಕಾರಣ ಎನ್ನುವುದು ಸ್ಥಳೀಯರ ಆರೋಪ.

ಈ ಭಾಗದ ಜನರಿಗೆ ರಸ್ತೆ ದಾಟುವುದಕ್ಕೆ ಅವಕಾಶ ಇಲ್ಲ. ವಾಹನ ಸವಾರರು ಯೂಟರ್ನ್ ಮಾಡಲು ಹೆಚ್ಚು ದೂರ ಕ್ರಮಿಸಬೇಕಾದುದರಿಂದ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿದ್ದು, ಇದರಿಂದಲೂ ಅಪಘಾತಗಳು ನಡೆಯುತ್ತಿವೆ.

ಬನ್ನಡ್ಕದಲ್ಲಿ ಸರ್ವಿಸ್ ರಸ್ತೆ ನಿರ್ಮಿಸಬೇಕು ಎಂದು ಸ್ಥಳೀಯ ನಾಗರಿಕರ ನಿಯೋಗ 2023ರಲ್ಲಿ ಸ್ಥಳೀಯ ಶಾಸಕರು ಮತ್ತು ಸಂಸದರಿಗೆ ಮನವಿ ಮಾಡಿದ್ದಾರೆ. ಇತ್ತೀಚೆಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಭೇಟಿಯಾಗಿ ಮತ್ತೊಂದು ಮನವಿ ಸಲ್ಲಿಸಲಾಗಿದೆ.

ದೈವದ ಕಲ್ಲು ತೆರವಾಗಿರುವ ಭಯ: ಬನ್ನಡ್ಕ ಪರಿಸರದಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸಲು ಹೆದ್ದಾರಿ ಕಾಮಗಾರಿ ನಡೆಯುವ ವೇಳೆ ಪರಿಸರದಲ್ಲಿ ಇತ್ತೆಂದು ಹೇಳಲಾಗುತ್ತಿದ್ದ ಗುಳಿಗ ದೈವದ ಕಲ್ಲನ್ನು ತೆರವು ಮಾಡಿರುವುದು ಕಾರಣ ಎಂದು ಕೆಲವರು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಪ್ರಮುಖರು ಸಭೆ ಸೇರಿ ಹತ್ತಿರದ ಬೇರೊಂದು ಜಾಗದಲ್ಲಿ ಗುಳಿಗ ಕಲ್ಲನ್ನು ಪ್ರತಿಷ್ಠಾಪಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಪ್ರಶ್ನಾ ಚಿಂತನೆ ನಡೆಸಿ ಮುಂದುವರಿಯಲು ಊರಿನ ಮುಖಂಡರು ತೀರ್ಮಾನಿಸಿದ್ದಾರೆ.

ಮೇ 31ಕ್ಕೆ ಪ್ರತಿಭಟನೆ: ಬನ್ನಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿದ್ದು, ಸರ್ವಿಸ್ ರಸ್ತೆ ನಿರ್ಮಾಣವಾಗಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಮೇ 31ರಂದು ಬೆಳಿಗ್ಗೆ 10ಕ್ಕೆ ಬನ್ನಡ್ಕದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಬನ್ನಡ್ಕದಲ್ಲಿ ಹಾದು ಹೋಗುವ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆ ನಿರ್ಮಾಣವಾಗಬೇಕು, ಅಮನೊಟ್ಟುನಿಂದ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕೂಡ ಸರಿಯಾಗಬೇಕು. ಇದೇ ಉದ್ದೇಶಕ್ಕೆ ಗ್ರಾಮಸ್ಥರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಎಂದು ರಾಜೇಶ್ ಶೆಟ್ಟಿ ಪಡುಮಾರ್ನಾಡು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-29-1446813920

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.