ಮೂಡುಬಿದಿರೆ: ‘ಅಪಘಾತ ವಲಯ’ ಎಂದು ಗುರುತಿಸಿಕೊಂಡಿರುವ ಮೂಡುಬಿದಿರೆ– ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಸರ್ವಿಸ್ ರಸ್ತೆ ನಿರ್ಮಿಸಬೇಕೆಂದು ಆಗ್ರಹಿಸಿ ಸರ್ಕಾರದ ಮೇಲೆ ಒತ್ತಡ ಹೇರಲು ಸ್ಥಳೀಯರು ಭಾನುವಾರ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆ ರದ್ದುಗೊಂಡಿದೆ.

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಡಿಬಿಎಲ್ ಕಂಪನಿ, ಜನಪ್ರತಿನಿಧಿಗಳು ಬನ್ನಡ್ಕದಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವ ಭರವಸೆ ನೀಡಿದ ಕಾರಣ ಗ್ರಾಮಸ್ಥರು ಪ್ರತಿಭಟನೆಯ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಪ್ರತಿಭಟನೆಗೆ ಕರೆ ನೀಡಿದವರಲ್ಲಿ ಹೆಚ್ಚಿನವರು ನಿರ್ದಿಷ್ಟ ರಾಜಕೀಯ ಪಕ್ಷವೊಂದರಲ್ಲಿ ಗುರುತಿಸಿಕೊಂಡವರು ಎನ್ನಲಾಗಿದ್ದು, ಪ್ರತಿಭಟನೆ ನಡೆಸಿದರೆ ಪಕ್ಷಕ್ಕೆ ಮುಜುಗರವಾಗಬಹುದೆಂಬ ಸೂಚನೆ ಬಂದಿರುವುದರಿಂದ ಪ್ರತಿಭಟನೆ ಕೈಬಿಡಲಾಗಿದೆ ಎನ್ನಲಾಗಿದೆ.

ಬನ್ನಡ್ಕದಲ್ಲಿ ಸರ್ವಿಸ್ ರಸ್ತೆ ಇಲ್ಲದಿರುವುದು ಮತ್ತು ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ಅಪಘಾತ ಹೆಚ್ಚುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಆಡಳಿತ ವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕ ಉಮಾನಾಥ ಕೋಟ್ಯಾನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬನ್ನಡ್ಕದಲ್ಲಿ ಹೆದ್ದಾರಿ ಬದಿಯ ಜಾಗವನ್ನು ವಿಸ್ತರಣೆಗೊಳಿಸಲಾಗಿದ್ದು, ಸಾರ್ವಜನಿಕರ ಆಕ್ರೋಶವನ್ನು ಸ್ವಲ್ಪ ಮಟ್ಟಿಗೆ ತಣ್ಣಗಾಗಿಸಿದೆ. ಬನ್ನಡ್ಕದಲ್ಲಿ ಸರ್ವಿಸ್ ರಸ್ತೆ ನಿರ್ಮಿಸಬೇಕೆಂದು ಗ್ರಾಮಸ್ಥರು 2ನೇ ಬಾರಿ ಸಂಸದರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಈ ಹಿಂದಿನ ಡಿಪಿಆರ್ನಲ್ಲಿ ಬನ್ನಡ್ಕದಲ್ಲಿ ಸರ್ವಿಸ್ ರಸ್ತೆ ಬಗ್ಗೆ ಉಲ್ಲೇಖ ಇರಲಿಲ್ಲ ಎನ್ನಲಾಗಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪರಿಷ್ಕೃತ ಡಿಪಿಆರ್ನಲ್ಲಿ ಸರ್ವಿಸ್ ರಸ್ತೆಯನ್ನು ಸೇರಿಸಿ ಕೇಂದ್ರ ಭೂ ಸಾರಿಗೆ ಇಲಾಖೆಗೆ ವರದಿ ಸಲ್ಲಿಸಬೇಕಾಗಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳುವಾಗ ಇನ್ನಷ್ಟು ವಿಳಂಬವಾಗಬಹುದು ಎಂದು ಮುಖಂಡರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-29-1431313503

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.