ಮೂಡುಬಿದಿರೆ (ದಕ್ಷಿಣ ಕನ್ನಡ): ರಾಷ್ಟ್ರೀಯ ಹೆದ್ದಾರಿಯಲ್ಲಿ ಬನ್ನಡ್ಕ ಸಮೀಪ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ ಮೃತಪಟ್ಟಿದ್ದಾರೆ.

ಕೋಟೆಬಾಗಿಲು ನಿವಾಸಿ, ರೋಟರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶ್ರವಣ್ ಎಸ್. ಸುವರ್ಣ (18) ಮೃತಪಟ್ಟವರು. ಬೈಕ್ ಸಹ ಸವಾರ, ಕಂಟೆಂಟ್ ಕ್ರಿಯೇಟರ್ ಆಗಿರುವ ಬನ್ನಡ್ಕದ ಸೂರಜ್ ಗಾಯಗೊಂಡು ಮಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗುರುವಾರ ರಾತ್ರಿ ಬನ್ನಡ್ಕದಲ್ಲಿ ಕಾರ್ಯಕ್ರಮ ಮುಗಿಸಿ ಅವರು ವಾಪಸ್ಸಾಗುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.