ಮೂಡುಬಿದಿರೆ: ವಿದ್ಯಾರ್ಥಿಯೊಬ್ಬನಿಗೆ ವಿಶೇಷ ತರಗತಿಯ ನೆಪದಲ್ಲಿ ಕರೆದೊಯ್ದು ನಗ್ನ ವಿಡಿಯೊ ಚಿತ್ರೀಕರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಶಿಕ್ಷಕನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಶಿಕ್ಷಕ ಅಲ್ತಾಫ್ ಬಂಧಿತ ಆರೋಪಿ.

ಗ್ರಾಮದ ಶಾಲೆಯೊಂದರಲ್ಲಿ ಸಂತ್ರಸ್ತ ಬಾಲಕ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಗಣಿತ ವಿಷಯದಲ್ಲಿ ಹೆಚ್ಚು ಅಂಕ ಕೊಡಿಸುವುದಾಗಿ ನಂಬಿಸಿದ ಶಿಕ್ಷಕ ಅಲ್ತಾಫ್, ಬಾಲಕನನ್ನು ತನ್ನ ಕೊಠಡಿಗೆ ಕರೆಸಿಕೊಂಡು ಅಲ್ಲಿ ಬಾಲಕನಿಗೆ ಮಾದಕ ದ್ರವ್ಯ ಬೆರೆಸಿದ ಜ್ಯೂಸ್ ನೀಡಿ ಅರೆಪ್ರಜ್ಞಾವಸ್ಥೆಗೆ ತಲುಪಿಸಿ, ಆತನ ನಗ್ನ ವಿಡಿಯೊ ಚಿತ್ರೀಕರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿಷಯ ಯಾರಿಗಾದರೂ ತಿಳಿಸಿದರೆ ಪರೀಕ್ಷೆ ಬರೆಯಲು ಬಿಡುವುದಿಲ್ಲ ಮತ್ತು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಬಾಲಕನ ಮೇಲೆ ಬಲವಂತವಾಗಿ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದು, ವಿರೋಧಿಸಿದಾಗ ಬೆಲ್ಟ್ನಿಂದ ಹಲ್ಲೆ ನಡೆಸಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಳೆದ ಕೆಲವು ದಿನಗಳಿಂದ ಬಾಲಕನ ಮಾನಸಿಕ ಹಾಗೂ ದೈಹಿಕ ಆರೋಗ್ಯದಲ್ಲಿ ಏರುಪೇರಾದಾಗ ಅನುಮಾನಗೊಂಡ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು ಮತ್ತು ಪೋಷಕರ ವಿಚಾರಣೆ ವೇಳೆ ಬಾಲಕನು ನಡೆದ ಘಟನೆಯನ್ನು ಬಾಯಿಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸರು ಆರೋಪಿ ಶಿಕ್ಷಕನ ವಿರುದ್ಧ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.