ಮೂಡುಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ನ ಮೂಡುಬಿದಿರೆ ಘಟಕದ 10ನೇ ವಾರ್ಷಿಕೋತ್ಸವ ಅಲಂಗಾರು ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ನಡೆಯಿತು.

ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಮಾತನಾಡಿ, ‘ಯಕ್ಷಧ್ರುವ ಪಟ್ಲ ಫೌಂಡೇಷನ್ನಿಂದ ಮೂರೂವರೆ ಸಾವಿರ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ, ಅಶಕ್ತ ಕಲಾವಿದರಿಗೆ ಮನೆ ನಿರ್ಮಾಣ, ಆರ್ಥಿಕ ನೆರವು, ಯಕ್ಷ, ನಾಟಕ, ಜಾನಪದ ಕಲಾವಿದರು, ದೈವಾರಾಧಕರು, ಕಂಬಳದಲ್ಲಿ ತೊಡಗಿಸಿಕೊಂಡಿರುವವರಿಗೆ ವಿಮೆ ಸೌಲಭ್ಯ ಒದಗಿಸಲಾಗುತ್ತಿದೆ’ ಎಂದರು.

ಮೇ 30ರಂದು ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಾತಿ– ಭೇದವಿಲ್ಲದೆ ಐದು ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು. ಸರ್ಕಾರ, ರಾಜಕೀಯ ವ್ಯಕ್ತಿಗಳಿಂದ ಸಹಕಾರ ಬಯಸದೆ ದಾನಿಗಳ ಸಹಕಾರದಿಂದ ಉತ್ತಮ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದರು.

ಸಂಸ್ಥೆಯ ಮೂಡುಬಿದಿರೆ ಘಟಕದ ಅಧ್ಯಕ್ಷ ದಿವಾಕರ ಶೆಟ್ಟಿ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಪಾವಂಜೆ ಯಕ್ಷಗಾನ ಮೇಳದ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ಅವರನ್ನು ಸನ್ಮಾನಿಸಲಾಯಿತು. ಚೌಟರ ಅರಮನೆಯ ಕುಲದೀಪ ಎಂ., ಮುಖಂಡ ಅಭಯಚಂದ್ರ ಜೈನ್, ಟ್ರಸ್ಟ್ ಸಂಚಾಲಕರಾದ ಪ್ರೇಮನಾಥ ಮಾರ್ಲ, ನೀಲೇಶ್ ಶೆಟ್ಟಿ ಒಂಟಿಕಟ್ಟೆ, ಸುದೇಶ್ ರೈ, ಪುರುಷೋತ್ತಮ ಭಂಡಾರಿ ಅಡ್ಯಾರ್, ರವಿಚಂದ್ರ ಶೆಟ್ಟಿ ಅಶೋಕನಗರ, ಆಲಂಗಾರು ದೇವಸ್ಥಾನದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಭಟ್ ಭಾಗವಹಿಸಿದ್ದರು. ಶಾಂತರಾಮ ಕುಡ್ವ ಸನ್ಮಾನ ಪತ್ರ ವಾಚಿಸಿದರು. ಸದಾಶಿವ ರಾವ್ ನೆಲ್ಲಿಮಾರ್ ನಿರೂಪಿಸಿದರು. ಬಳಿಕ ‘ಸಮಗ್ರ ಭೀಷ್ಮ’ ಯಕ್ಷಗಾನ ಪ್ರದರ್ಶನ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-29-927255116

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.