ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.16ರಿಂದ ಆಳ್ವಾಸ್ ನುಡಿಸಿರಿ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮಾಹಿತಿ
Last Updated 1 ಆಗಸ್ಟ್ 2022, 13:10 IST
ಅಕ್ಷರ ಗಾತ್ರ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು- ನುಡಿ- ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ಯು ಡಿಸೆಂಬರ್‌ 16, 17 ಮತ್ತು 18ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿಯ ಆವರಣದಲ್ಲಿ ನಡೆಯಲಿದೆಎಂದುಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.

‘2004ರಿಂದ ಆರಂಭಗೊಂಡ ಆಳ್ವಾಸ್ ನುಡಿಸಿರಿ ಸಮ್ಮೇಳನವನ್ನು ಕಳೆದ ಮೂರು ವರ್ಷಗಳಿಂದ ಕೋವಿಡ್ ಮತ್ತು ಅಕಾಲಿಕ ನೆರೆಯ ಕಾರಣಕ್ಕೆ ಸ್ಥಗಿತ ಮಾಡಲಾಗಿತ್ತು. ಕನ್ನಡಾಭಿಮಾನಿಗಳ ಒತ್ತಾಸೆಯಿಂದ ಈ ವರ್ಷದಿಂದ ಮತ್ತೆ ಪುನರಾರಂಭಗೊಂಡಿದ್ದು, ಮೂರು ದಿನಗಳು ನಡೆಯುವ ಈ ಸಮ್ಮೇಳನವು ಸಂಭ್ರಮದ ವಾತಾವರಣವನ್ನು ಕಲ್ಪಿಸಲಿದೆ. ಈ ನಿಟ್ಟಿನಲ್ಲಿ ಸಂಸ್ಥೆ ಈಗಾಗಲೇ ಕಾರ್ಯಪ್ರವೃತರಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸಿ ಆಳ್ವಾಸ್ ನುಡಿಸಿರಿ 2022ನ್ನು ಯಶಸ್ವಿಗೊಳಿಸಬೇಕು’ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT