ಮೂಡುಬಿದಿರೆ: ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದಲ್ಲಿರುವ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ 23ನೇ ವರ್ಷದ ಹೊನಲು ಬೆಳಕಿನ ಕೋಟಿ-ಚನ್ನಯ ಜೋಡುಕರೆ ಕಂಬಳವು ಜ.31ರಂದು ಬೆಳಿಗ್ಗೆ 7 ಗಂಟೆಯಿಂದ ಆರಂಭಗೊಳ್ಳಲಿದೆ ಎಂದು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಚೌಟರ ಅರಮನೆಯ ಕುಲದೀಪ ಎಂ.ಅಧ್ಯಕ್ಷತೆಯಲ್ಲಿ, ಅಲಂಗಾರು ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್, ಅಲಂಗಾರು ಚರ್ಚ್ ಧರ್ಮಗುರು ಮೆಲ್ವಿನ್ ನೊರೊನ್ಹಾ, ಪುತ್ತಿಗೆ ನೂರಾನಿ ಮಸೀದಿಯ ಮೌಲಾನಾ ಝೀಯಾವುಲ್ಲಾ ಹಕ್, ಕುಂಟಾಡಿ ಸುಧೀರ್ ಹೆಗ್ಡೆ ಕಂಬಳವನ್ನು ಉದ್ಘಾಟಿಸಲಿರುವರು.

ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸಭಾ ವೇದಿಕೆ ಉದ್ಘಾಟಿಸಲಿದ್ದು, ಆಧ್ಯಾತ್ಮಿಕ ಗುರು ಚಂದ್ರಶೇಖರ ಸ್ವಾಮೀಜಿ ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ. ರಾಣಿ ಅಬ್ಬಕ್ಕ ದೇವಿಯ ಕುರಿತು ವಾಗ್ಮಿ ಶ್ರೀಕಾಂತ್ ಶೆಟ್ಟಿ ಉಪನ್ಯಾಸ ನೀಡಲಿದ್ದಾರೆ. ಜವನೆರ್ ಬೆದ್ರ ಫೌಂಡೇಷನ್ ಸಂಸ್ಥಾಪಕ ಅಮರ್ ಕೋಟೆ ಅವರನ್ನು ಸನ್ಮಾನಿಸಲಾಗುವುದು.

ಸಂಜೆ 5 ಗಂಟೆಗೆ ನಡೆಯುವ ಸಭಾಕಾರ್ಯಕ್ರಮವನ್ನು ಆಂಧ್ರ ಪ್ರದೇಶದ ರಾಜ್ಯಪಾಲ ಅಬ್ದುಲ್ ನಝೀರ್ ಉದ್ಘಾಟಿಸಲಿದ್ದಾರೆ. ಕಂಬಳ ಸಮಿತಿಯ ಅಧ್ಯಕ್ಷ ಶಾಸಕ ಉಮಾನಾಥ ಎ.ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವ ವಿ.ಸೋಮಣ್ಣ, ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭಾಗವಹಿಸುವರು.

ಎಂ.ಆರ್.ಜಿ. ಗ್ರೂಪ್ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ಅವರಿಗೆ ರಾಜ್ಯಮಟ್ಟದ ವೀರ ರಾಣಿ ಅಬ್ಬಕ್ಕ 500 ಸಂಭ್ರಮ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಅಸ್ತ್ರ ಗ್ರೂಪ್ನ ಲಾಂಚುಲಾಲ್ ಕೆ.ಎಸ್. ಅವರಿಗೆ ಕೋಟಿ ಚನ್ನಯ ಪ್ರಶಸ್ತಿ ಪ್ರದಾನ ಮಾಲಾಗುವುದು. ಸಿನಿಮಾ ನಿರ್ದೇಶಕ, ನಟ ತರುಣ್ ಸುಧೀರ್, ನಟಿ ಸೋನಲ್ ಮೊಂತೆರೋ ಭಾಗವಹಿಸಲಿದ್ದಾರೆ ಎಂದರು.

ಕಂಬಳ ಸಮಿತಿ ಪ್ರಮುಖರಾದ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್, ರಂಜಿತ್ ಪೂಜಾರಿ, ದಿನೇಶ್ ಪುತ್ರನ್, ಹರಿಪ್ರಸಾದ್ ಶೆಟ್ಟಿ ಹಾಗೂ ಸುರೇಶ್ ಕೆ. ಪೂಜಾರಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.