ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಮೂಲತ್ವ ಪ್ರಶಸ್ತಿಗೆ ಫೂಲ್ಬಸನ್‌ ಬಾಯಿ ಆಯ್ಕೆ

Published 22 ಡಿಸೆಂಬರ್ 2023, 23:30 IST
Last Updated 22 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಮಂಗಳೂರು: ಮಂಗಳೂರಿನ ಮೂಲತ್ವ ಫೌಂಡೇಷನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನೀಡುವ ‘ಮೂಲತ್ವ ವಿಶ್ವಪ್ರಶಸ್ತಿ’ಗೆ ಈ ಬಾರಿ ಛತ್ತೀಸಘಡದ ಸಮಾಜ ಸೇವಕಿ ಫೂಲ್ಬಸನ್‌ ಬಾಯಿ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹1.01 ಲಕ್ಷ ನಗದು, ಫಲಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಡಿ. 24ರಂದು ಬೆಳಿಗ್ಗೆ 10 ಗಂಟೆಗೆ ಕೊಡಿಯಾಲ್‌ಬೈಲ್ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ಸಂಸ್ಥಾಪಕ ಪ್ರಕಾಶ್ ಮೂಲತ್ವ ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೂಲತ್ವ ಸಂಸ್ಥೆಯು ಕಳೆದ ಎಂಟು ವರ್ಷಗಳಿಂದ ಪ್ರತಿ ವರ್ಷ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಮೂಲತ್ವ ಪ್ರಶಸ್ತಿ ನೀಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT