ಮತೀಯ ಗೂಂಡಾಗಿರಿ: ಮೂವರ ಬಂಧನ
ಮಂಗಳೂರು: ನಗರದ ನಂತೂರಿನಲ್ಲಿ ಈಚೆಗೆ ನಡೆದ ಮತೀಯ ಗೂಂಡಾಗಿರಿ ಪ್ರಕರಣ ಸಂಬಂಧ ಕದ್ರಿ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಹಿಂದೂ ಯುವತಿ ಜೊತೆಯಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಯ್ಯದ್ ರಶೀಮ್ ಉಮರ್ ಅವರನ್ನು ಕೆಳಗಿಳಿಸಿದ ದುಷ್ಕರ್ಮಿಗಳ ತಂಡ ಅವರ ಮೇಲೆ ಗುರುವಾರ ಹಲ್ಲೆ ನಡೆಸಿತ್ತು.
’ಬಂಧಿತರನ್ನು ಅಸೈಗೋಳಿಯ ರಾಕೇಶ್, ಸುರತ್ಕಲ್‌ನ ಪ್ರಕಾಶ್ ಹಾಗೂ ಮುತ್ತು ಎಂದು ಗುರುತಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹಲ್ಲೆ ನಡೆದ ಬಗ್ಗೆ ಸಯ್ಯದ್ ರಶೀಮ್ ಉಮರ್ ಅವರು ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323, 324, 504 ಹಾಗೂ 506ರ ಅಡಿ ಎಫ್‌ಐಆರ್ ದಾಖಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.