ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಕಿಸ್ಟ್ಯಾಂಡ್‌: ಮತೀಯ ಗೂಂಡಾಗಿರಿ

Published 28 ನವೆಂಬರ್ 2023, 7:01 IST
Last Updated 28 ನವೆಂಬರ್ 2023, 7:01 IST
ಅಕ್ಷರ ಗಾತ್ರ

ಮಂಗಳೂರು: ನಗರದ ಪಾಂಡೇಶ್ವರ ಠಾಣೆ ವ್ಯಾಪ್ತಿಯ ಮಂಕಿಸ್ಟ್ಯಾಂಡ್‌ನಲ್ಲಿ ಮತೀಯ ಗೂಂಡಾಗಿರಿ ಪ್ರಕರಣ ಸೋಮವಾರ ಸಂಜೆ ನಡೆದಿದೆ.

ಮಳಿಗೆಯೊಂದರಲ್ಲಿ ಕೆಲಸ ಮಾಡುವ ಬೇರೆ ಬೇರೆ ಧರ್ಮದ ಯುವಕ ಮತ್ತು ಯುವತಿ ಸ್ಕೂಟರ್‌ನಲ್ಲಿ ಬೈಕಿನಲ್ಲಿ ಒಟ್ಟಿಗೆ ಹೋಗುತ್ತಿದ್ದಾಗ ಹಿಂಬಾಲಿಸಿದ ಬಜರಂಗ ದಳದ ಕಾರ್ಯಕರ್ತರು, ಅವರನ್ನು ತಡೆದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದಿದೆ. ಸ್ಥಳದಲ್ಲಿ ಎರಡೂ ಕೋಮುಗಳ ಯುವಕರು ಸೇರಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಗುಂಪನ್ನು ಚದುರಿಸಿದರು ಎಂದು ಮೂಲಗಳು ತಿಳಿಸಿವೆ.

ಯುವಕ ಮತ್ತು ಯುವತಿಯನ್ನು ಪೊಲೀಸರು ಪಾಂಡೇಶ್ವರ ಠಾಣೆಗೆ ಕರೆದೊಯ್ದಿದ್ದಾರೆ.

'ಮತೀಯ ಗೂಂಡಾಗಿರಿ ನಡೆದಿರುವುದು ನಿಜ’ ಎಂದು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರವಾಲ್‌ ಖಚಿತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT