ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ವಿಮಾನ ನಿಲ್ದಾಣದಲ್ಲಿ ₹1.09 ಕೋಟಿ ಮೌಲ್ಯದ ಚಿನ್ನ ವಶ

Last Updated 15 ಜನವರಿ 2021, 5:47 IST
ಅಕ್ಷರ ಗಾತ್ರ

ಮಂಗಳೂರು: ಶಾರ್ಜಾದಿಂದ ನಗರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು ₹1.09 ಕೋಟಿ ಮೌಲ್ಯದ 2.15 ಕೆ.ಜಿ. ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಕಾಸರಗೋಡಿನ ಫೈಜಲ್ ತೊಟ್ಟಿ ಮೆಲ್ಪರಂಬ ಹಾಗೂ ಮೊಹಮ್ಮದ್‌ ಶೋಹೈಬ್‌ ಮುಗು ಎಂಬುವವರು ಗುರುವಾರ ಏರ್‌ ಇಂಡಿಯಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಸಂಶಯದ ಮೇಲೆ ತಪಾಸಣೆಗೆ ಒಳಪಡಿಸಲಾಗಿತ್ತು. ಈ ಸಂದರ್ಭದಲ್ಲಿ 24 ಕ್ಯಾರೆಟ್‌ನ 2.154 ಕೆ.ಜಿ. ಚಿನ್ನವನ್ನು ಒಳ ಉಡುಪಿನಲ್ಲಿ ಬಚ್ಚಿಟ್ಟಿರುವುದು ಪತ್ತೆಯಾಗಿದೆ.

ಕಸ್ಟಮ್ಸ್‌ ಉಪ ಆಯುಕ್ತ ಪ್ರವೀಣ ಕಂಡಿ, ಸೂಪರಿಂಟೆಂಡೆಂಟ್‌ ಶ್ರೀಕಾಂತ್‌ ಕೆ., ಶುಭೆಂದು ರಂಜನ್‌ ಬೆಹರೆ, ನವೀನ್‌ಕುಮಾರ್‌ ಅವರನ್ನು ಒಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ. ತಂಡವನ್ನು ಕಸ್ಟಮ್ಸ್ ಆಯುಕ್ತ ಇಮಾಮುದ್ದೀನ್ ಅಹ್ಮದ್, ಜಂಟಿ ಆಯುಕ್ತ ಜೋನಸ್ ಜಾರ್ಜ್ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT