ಶನಿವಾರ, ಅಕ್ಟೋಬರ್ 31, 2020
24 °C
ಮಲೆಕುಡಿಯರ ಮುಂದಾಳತ್ವ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮೊಸರು ಕುಡಿಕೆ ಉತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಪ್ರಯುಕ್ತ ಮಲೆಕುಡಿಯ ಸಮುದಾಯದವರ ಮುಂದಾಳತ್ವದಲ್ಲಿ ಶುಕ್ರವಾರ ಮೊಸರು ಕುಡಿಕೆ ಉತ್ಸವ ನಡೆಯಿತು.

ಪೂರ್ವ ಶಿಷ್ಟ ಸಂಪ್ರದಾಯದಂತೆ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಮೊಸರು ಕುಡಿಕೆ ನಡೆಸುವ ಮೂಲಕ ಈ ಬಾರಿ ಸರಳವಾಗಿ ಆಚರಿಸಲಾಯಿತು.

ಕಾಶಿಕಟ್ಟೆಯಲ್ಲಿ ಅಷ್ಟಮಿಯಂದು ಪೂಜಿತವಾದ ಕೃಷ್ಣನ ವಿಗ್ರಹವನ್ನು ಸ್ಥಳೀಯ ಮೂಲನಿವಾಸಿಗಳಾದ ಮಲೆಕುಡಿಯ ಜನಾಂಗದವರು ಪಾಲಕಿಯಲ್ಲಿ ಬಿರುದಾವಳಿ, ಮಂಗಳವಾದ್ಯದ ಮೂಲಕ ಮೆರವಣಿಗೆಯಲ್ಲಿ ದೇವಳಕ್ಕೆ ತಂದು ಅಲ್ಲಿ ವಿಶೇಷ ಪೂಜೆ ನೆರವೇರಿಸಿದರು. ದೇವಳಕ್ಕೆ ಪ್ರದಕ್ಷಿಣೆ ಬಂದು ದೇವಳದಿಂದ ಕಾಶಿಕಟ್ಟೆಗೆ ಉತ್ಸವವು ತೆರಳಿತು.

ಈ ನಡುವೆ ರಥಬೀದಿಯಿಂದ ಕಾಶಿಕಟ್ಟೆ ತನಕ ಅಲ್ಲಲ್ಲಿ ಕಂಬದಲ್ಲಿ ಕಟ್ಟಿದ್ದ ಮೊಸರು ತುಂಬಿದ ಕುಡಿಕೆಗಳನ್ನು ಮಹಿಳೆಯರು ಒಡೆದು ಜನ್ಮಾಷ್ಟಮಿಯನ್ನು ಆಚರಿಸಿದರು. ಪಲ್ಲಕ್ಕಿಯನ್ನು ಮಲೆಕುಡಿಯ ಸಮುದಾಯದವರು ಹೊತ್ತುಕೊಂಡು ಸಾಗಿದರು. ನಂತರ ಶ್ರೀಕೃಷ್ಣನಿಗೆ ಮಹಾಪೂಜೆ ನೆರವೇರಿತು.

ಪುರೋಹಿತ ಸನತ್ ನೂರಿತ್ತಾಯ ಉತ್ಸವದ ವಿದಿವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಳದ ನಾಗೇಶ್ ಎ.ವಿ, ಮಲೆಕುಡಿಯ ಜನಾಂಗದ ಗುರಿಕಾರ ದಿನಕರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು