ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕ್ಕೆ ದೇವಳ: ಕೃಷ್ಣಾಷ್ಟಮಿ, ಮೊಸರು ಕುಡಿಕೆ

Published 8 ಸೆಪ್ಟೆಂಬರ್ 2023, 12:34 IST
Last Updated 8 ಸೆಪ್ಟೆಂಬರ್ 2023, 12:34 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಳದಲ್ಲಿ ಶ್ರೀಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವವನ್ನು ಪೂರ್ವ ಶಿಷ್ಟ ಸಂಪ್ರದಾಯದಂತೆ ಅಷ್ಟಮಿಯ ಮಾರನೇಯ ದಿನ ಆಚರಿಸಲಾಯಿತು.

ಕಾಶಿಕಟ್ಟೆಯಲ್ಲಿ ಅಷ್ಟಮಿಯಂದು ಪೂಜಿತವಾದ ಕೃಷ್ಣನ ವಿಗ್ರಹವನ್ನು ಸ್ಥಳೀಯ ಮೂಲನಿವಾಸಿಗಳಾದ ಮಲೆಕುಡಿಯ ಜನಾಂಗದವರು ಪಾಲಕಿಯಲ್ಲಿ ಆನೆ, ಬಿರುದಾವಳಿ, ಮಂಗಳವಾದ್ಯದ ಮೂಲಕ ಮೆರವಣಿಗೆಯಲ್ಲಿ ದೇವಳಕ್ಕೆ ತಂದರು. ಬಳಿಕ ದೇವಳಕ್ಕೆ ಪ್ರದಕ್ಷಿಣೆ ಬಂದು ದೇವಳದಿಂದ ಕಾಶಿಕಟ್ಟೆಗೆ ಉತ್ಸವವು ತೆರಳಿತು.

ರಥಬೀದಿಯಿಂದ ಕಾಶಿಕಟ್ಟೆ ವರೆಗೆ ಕಂಬದಲ್ಲಿ ಕಟ್ಟಿದ್ದ ಮೊಸರು ತುಂಬಿದ ಕುಡಿಕೆಗಳನ್ನು ಮಹಿಳೆಯರು ಒಡೆದರು. ಕಾಶಿಕಟ್ಟೆಯಲ್ಲಿ ಮಹಾಪೂಜೆ ನೆರವೇರಿತು. ಸಂಪ್ರದಾಯದಂತೆ ಪೇಟ್ಲೆ ಬೆಡಿ ಒಡೆಯುವ ಕಾರ್ಯ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT