ಭಾನುವಾರ, ಮೇ 9, 2021
27 °C

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗೆ ಮಾತೃವಿಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

pv photo

ಮೂಡುಬಿದಿರೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರ ತಾಯಿ ಅಮಿದಾಬಿ(88) ಶುಕ್ರವಾರ ಬೆಳಿಗ್ಗೆ ನವದೆಹಲಿಯಲ್ಲಿ ನಿಧನರಾದರು. ಅವರಿಗೆ 6 ಮಂದಿ ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ.

ಮಗ ಅಬ್ದುಲ್ ನಜೀರ್ ಅವರೊಂದಿಗೆ ದೆಹಲಿಯಲ್ಲೇ ನೆಲೆಸಿದ್ದರು. ಮೃತರ ಪಾರ್ಥಿವ ಶರೀರವನ್ನು ದೆಹಲಿಯಿಂದ ಸ್ವಂತ ಊರಾದ ಮೂಡುಬಿದಿರೆ ಸಮೀಪದ ಬೆಳುವಾಯಿ ಗ್ರಾಮದ ಕಾನಕ್ಕೆ ಶುಕ್ರವಾರ ತರುವ ನಿರೀಕ್ಷೆಯಿದೆ.

ನಂತರ ಅಲ್ಲೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು