ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಯೋಜನಾಬದ್ಧವಾಗಿ ನಡೆಸುವಂತೆ ಸಂಸದ ಬ್ರಿಜೇಶ್ ಚೌಟ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೇಂದ್ರ ಸರ್ಕಾರದಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಸಂಬಂಧಿಸಿ ಬುಧವಾರ ಇಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

ಬಿ.ಸಿ.ರೋಡ್-ಅಡ್ಡಹೊಳೆ, ಸಾಣೂರು -ಬಿಕರ್ನಕಟ್ಟೆ, ಪೂಂಜಾಲಕಟ್ಟೆ- ಚಾರ್ಮಾಡಿ ಸೇರಿದಂತೆ ವಿವಿಧೆಡೆ ಹೆದ್ದಾರಿ ಕಾಮಗಾರಿಗಳು ನಡೆಯುತ್ತಿವೆ. ಈ ಯೋಜನೆಗಳು ಪೂರ್ಣಗೊಂಡರೆ ಜಿಲ್ಲೆಯ ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ ಪ್ರಗತಿ ಆಗಲಿದೆ. ಬಿ.ಸಿ.ರೋಡ್ - ಅಡ್ಡಹೊಳೆ ಹೆದ್ದಾರಿ ಕಾಮಗಾರಿಯನ್ನು ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ನಡೆಸಬೇಕು, ಸಂಪೂರ್ಣ ಕಾಮಗಾರಿಯನ್ನು ಸಂಘಟಿತವಾಗಿ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.

ಬಿ.ಸಿ.ರೋಡ್ನಿಂದ ಮಾಣಿವರೆಗಿನ ಹೆದ್ದಾರಿ ಕಾಮಗಾರಿಯನ್ನು ನಿರ್ವಹಿಸುತ್ತಿರುವ ವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಸಾರ್ವಜನಿಕರ ತಾಳ್ಮೆ ಪರೀಕ್ಷಿಸಿ ಕಾಮಗಾರಿ ನಡೆಸುವುದು ಬೇಡ. ಕಳೆದ ಹಲವು ತಿಂಗಳುಗಳಿಂದ ಬಸ್, ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಇಲಾಖೆಯು ತನ್ನ ಸಂಪೂರ್ಣ ಸಾಮರ್ಥ್ಯ, ಮಾನವ ಸಂಪನ್ಮೂಲ ಹಾಗೂ ಯಂತ್ರೋಪಕರಣಗಳನ್ನು ಬಳಸಿ ಕಾಮಗಾರಿ ನಿರ್ವಹಿಸಬೇಕು. ಜುಲೈ 5ರ ಒಳಗೆ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಜಂಕ್ಷನ್ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಗಡುವು ನೀಡಿದರು.

ತಲಪಾಡಿ - ಕಾಸರಗೋಡುವರೆಗೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯನ್ನು ಯಾವುದೇ ಸಮಸ್ಯೆಗಳಿಲ್ಲದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ವಹಿಸಿದೆ. ಇದೇ ಮಾದರಿಯನ್ನು ಅನುಸರಿಸಿ ಕಾಮಗಾರಿ ನಡೆಸುವಂತೆ ಅವರು ಸೂಚಿಸಿದರು.

ಕಾರ್ಕಳ - ಮೂಡುಬಿದಿರೆ - ಮಂಗಳೂರು ಹೆದ್ದಾರಿಯಲ್ಲಿ ಚತುಷ್ಪಥ ಕಾಮಗಾರಿಯಲ್ಲಿ ಸಮಸ್ಯೆ ಇರುವ ಸ್ಥಳಗಳನ್ನು ಹೊರತುಪಡಿಸಿ ಉಳಿದೆಡೆ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಮೂಡುಬಿದಿರೆ ಬೈಪಾಸ್ ನಿರ್ಮಾಣಕ್ಕೆ ಭೂಸ್ವಾಧೀನಗೊಂಡ ಜಮೀನನ್ನು ಹೆದ್ದಾರಿ ಪ್ರಾಧಿಕಾರಕ್ಕೆ ಶೀಘ್ರವೇ ಹಸ್ತಾಂತರಿಸಲು ಅಧಿಕಾರಿಗಳಿಗೆ ತಿಳಿಸಿದರು.

ಕೂಳೂರು ಸೇತುವೆ ಕಾಮಗಾರಿ ಹಾಗೂ ಹೊಸ ಸೇತುವೆ ಬಗ್ಗೆ ಸಂಸದರು ಮಾಹಿತಿ ಪಡೆದರು. ಕಾಮಗಾರಿ ಸದ್ಯಕ್ಕೆ ಸ್ಥಗಿತಗೊಂಡಿರುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಅಝ್ಮಿ ತಿಳಿಸಿದರು. ಇದೊಂದು ಗಂಭೀರ ವಿಷಯವಾಗಿದ್ದು, ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿಗಳ ಗಮನಕ್ಕೆ ತರಲು ಸಂಸದರು ಜಿಲ್ಲಾಧಿಕಾರಿಗೆ ಸೂಚಿಸಿದರು.

ಕೊಟ್ಟಾರ ಚೌಕಿ ಸರ್ವಿಸ್ ರಸ್ತೆ, ಕೆಪಿಟಿ ಓವರ್ ಪಾಸ್, ಪದುವಾ ಜಂಕ್ಷನ್, ನಂತೂರು ಮೇಲ್ಸೇತುವೆ ಬಗ್ಗೆ ಪರಿಶೀಲನೆ ನಡೆಸಿದ ಅವರು ಈ ಬಗ್ಗೆ ಶೀಘ್ರವೇ ಪ್ರತ್ಯೇಕ ಸಭೆ ಕರೆದು ಎಲ್ಲ ಗೊಂದಲಗಳನ್ನು ಬಗೆಹರಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು. ಕೆಪಿಟಿ ಜಂಕ್ಷನ್ ಕಾಮಗಾರಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಾತನಾಡಿ, ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲಕರವಾಗುವಂತೆ ತಾತ್ಕಾಲಿಕ ವ್ಯವಸ್ಥೆಯನ್ನು ನಡೆಸಲಾಗಿದೆ. ಮಳೆಗಾಲದವರೆಗೆ ಈ ಹೆದ್ದಾರಿ ಬಗ್ಗೆ ನಿಗಾ ವಹಿಸಲು ಸೂಚಿಸಲಾಗಿದೆ. ಕೂಳೂರು ಹೊಸ ಸೇತುವೆಗೆ ಹಾಕಲಾದ ಮಣ್ಣನ್ನು ತೆರವುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ., ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮಹಾಪಾತ್ರ, ಪ್ರೊಬೇಷನರಿ ಐಎಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಆನಂದ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.