ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರಿನ ಇಎಸ್‌ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಕಟೀಲ್‌ ಮನವಿ

Published 8 ಫೆಬ್ರುವರಿ 2024, 4:11 IST
Last Updated 8 ಫೆಬ್ರುವರಿ 2024, 4:11 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿನ ಕಾರ್ಮಿಕರ ರಾಜ್ಯ ವಿಮಾ (ಇಎಸ್ಐ) ನಿಗಮದ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವ ಭೋಪೇಂದ್ರ ಯಾದವ್ ಅವರಿಗೆ ಸಂಸದ ನಳಿನ್‌ ಕುಮಾರ್ ಕಟೀಲ್ ನವದೆಹಲಿಯಲ್ಲಿ ಮನವಿ ಸಲ್ಲಿಸಿದ್ದಾರೆ.

ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲ ಕಲ್ಪಿಸಲು ಇಲ್ಲಿನ ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಪಡಿಸಬೇಕು. ಎಂ.ಆರ್.ಐ. ಘಟಕ, ಸಿ.ಟಿ. ಸ್ಕಾನಿಂಗ್ ಯಂತ್ರಗಳು ಸೇರಿದಂತೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಒದಗಿಸಬೇಕು. ತಜ್ಞ ವೈದ್ಯರನ್ನು ಹಾಗೂ ಅಗತ್ಯ ಸಂಖ್ಯೆ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಅವರು ಸಚಿವರನ್ನು ಒತ್ತಾಯಿಸಿದ್ದಾರೆ.

‘ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ’ ಎಂದು ನಳಿನ್‌ ಕುಮಾರ್‌ ಕಟೀಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT