ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂತೂರು: ಮಳೆ ನೀರು ನಿಲ್ಲದಂತೆ ವ್ಯವಸ್ಥೆ

ಚರಂಡಿ ಕಾಮಗಾರಿ ವೀಕ್ಷಿಸಿದ ಸಂಸದ ನಳಿನ್‌ಕುಮಾರ್‌
Last Updated 14 ಮೇ 2020, 16:30 IST
ಅಕ್ಷರ ಗಾತ್ರ

ಮಂಗಳೂರು: ನಗರ ಭಾಗವಾದ ನಂತೂರು ವೃತ್ತದ ಬಳಿ ಮಳೆ ನೀರು ಹರಿದು ಹೋಗಲು ಚರಂಡಿ ನಿರ್ಮಿಸುತ್ತಿರುವ ಕಾಮಗಾರಿಯನ್ನು ಸಂಸದ ನಳಿನ್‌ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಮೇಯರ್ ದಿವಾಕರ ಪಾಂಡೇಶ್ವರ ಗುರುವಾರ ವೀಕ್ಷಿಸಿದರು.

ಈ ವೇಳೆ ಮಾತನಾಡಿದ ಸಂಸದ ನಳಿನ್‌ಕುಮಾರ್‌, ‘ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಒಂದಾಗಿರುವ ನಂತೂರು ವೃತ್ತದ ಬಳಿ ಪ್ರತಿ ವರ್ಷ ಮಳೆಗಾಲದಲ್ಲಿ ರಸ್ತೆಯಲ್ಲೇ ನೀರು ತುಂಬಿ ಜನಸಾಮಾನ್ಯರಿಗೆ ಸಮಸ್ಯೆಯಾಗುತ್ತಿತ್ತು. ಆ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಕ ಕಾರ್ಕಳ ಭಾಗಕ್ಕೆ ತೆರಳುವ ರಸ್ತೆಯ ಎಡಭಾಗದಿಂದ ಬಲಬದಿಗೆ ಮಳೆ ನೀರು ಹರಿದು ಹೋಗಲು ಚರಂಡಿ ನಿರ್ಮಿಸುವ ಕಾಮಗಾರಿ ಪ್ರಾರಂಭವಾಗಿದೆ’ ಎಂದು ತಿಳಿಸಿದರು.

ಶಾಸಕ ಕಾಮತ್ ಮಾತನಾಡಿ, ‘ನಂತೂರು ಜಂಕ್ಷನ್‌ನಲ್ಲಿ ಮಳೆ ನೀರು ನಿಲ್ಲದ ರೀತಿಯಲ್ಲಿ ಚರಂಡಿ ನಿರ್ಮಿಸಲು ಈ ಭಾಗದ ಜನರು ಮನವಿ ಸಲ್ಲಿಸಿದ್ದರು. ಪ್ರತಿ ಮಳೆಗಾಲದಲ್ಲೂ ಈ ರಸ್ತೆಯ ಮೇಲೆ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೆರಳಲು ಸಮಸ್ಯೆ ಉಂಟಾಗುತ್ತಿತ್ತು. ಇಲ್ಲಿ ಚರಂಡಿ ನಿರ್ಮಾಣವಾದರೆ, ವಾಹನ ಸವಾರರಿಗೆ ಸಮಸ್ಯೆ ಎದುರಾಗುವುದಿಲ್ಲ ಎನ್ನುವ ಕಾರಣದಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ’ ಎಂದು ಹೇಳಿದರು.

ಸದ್ಯ ಕಾಮಗಾರಿ ಪ್ರಾರಂಭಿಸಲಾಗಿದೆ. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸ್ವಲ್ಪ ಸಮಸ್ಯೆ ಆಗಬಹುದು. ಆದರೆ, ಭವಿಷ್ಯದ ಹಿತದೃಷ್ಟಿಯಿಂದ ಸಾರ್ವಜನಿಕರು ಸಂಪೂರ್ಣ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷೆ ಪೂರ್ಣಿಮಾ, ಪಾಲಿಕೆ ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು, ಶಕಿಲಾ ಕಾವಾ, ಮನೋಹರ್ ಕದ್ರಿ, ಕಾವ್ಯ ನಟರಾಜ್, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಜೆ. ಸುರೇಂದ್ರ, ರೂಪಾ ಡಿ. ಬಂಗೇರಾ, ಭಾಸ್ಕರ್‌ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT