ಶನಿವಾರ, ಜೂಲೈ 11, 2020
25 °C

ಪಂಪ್‌ವೆಲ್‌ ಮೇಲ್ಸೇತುವೆ ಪರಿಶೀಲಿಸಿದ ನಳಿನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿಯನ್ನು ಪ್ರತ್ಯೇಕ ತಂಡದಿಂದ ಪರಿಶೀಲನೆ ನಡೆಸಿ, ವರದಿ ನೀಡುವಂತೆ ಸಂಸದ ನಳಿನ್‌ಕುಮಾರ್ ಕಟೀಲ್ ಅವರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಂಪ್‌ವೆಲ್ ಮೇಲ್ಸೇತುವೆಯ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳ ಜತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ರಸ್ತೆ ಸಮತಟ್ಟುಗೊಳಿಸಿ, ಮಣ್ಣು ಹಾಕಿದ ಬಳಿಕ ನಿರ್ಮಿಸಿದ ತಡೆಗೋಡೆಯಲ್ಲಿ ಸಣ್ಣ ಬಿರುಕು ಉಂಟಾಗಿತ್ತು. ಅದನ್ನು ತಕ್ಷಣ ದುರಸ್ತಿ ಪಡಿಸಲಾಗಿದೆ. ಇದರಿಂದ ಮೇಲ್ಸೇತುವೆಗೆ ಯಾವುದೇ ಹಾನಿಯಾಗಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು.

ಕಾಮಗಾರಿಯಲ್ಲಿ ಏನಾದರೂ ಲೋಪ ಉಂಟಾಗಿದೆಯೆ ಎಂಬುದರ ಬಗ್ಗೆ ಪ್ರತ್ಯೇಕ ತಂಡದಿಂದ ಪರಿಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಸಂಸದ ನಳಿನ್‌ಕುಮಾರ್‌ಸೂಚಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು