ಮಂಗಳವಾರ, ಸೆಪ್ಟೆಂಬರ್ 28, 2021
21 °C

‘ದುಷ್ಕರ್ಮಿಗಳನ್ನು ಬಂಧಿಸಿ ಕ್ರಮವಹಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಪುತ್ತೂರಿನ ಕಬಕದಲ್ಲಿ ಗ್ರಾಮ ಸ್ವರಾಜ್ಯ ರಥಕ್ಕೆ ಎಸ್‌ಡಿಪಿಐ ಕಾರ್ಯಕರ್ತರು ಅಡ್ಡಿ ಪಡಿಸಿರುವುದು ದೇಶ ವಿರೋಧಿ ಕೃತ್ಯವಾಗಿದೆ. ವೀರ ಸಾವರ್ಕರ್‌ಗೆ ಅಪಮಾನ ಮಾಡುವವರನ್ನು ಸಹಿಸಲು ಸಾಧ್ಯವಿಲ್ಲ. ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.

ಐಎಸ್ ಉಗ್ರರ ಜತೆ ಸಂಬಂಧ ಇಟ್ಟುಕೊಂಡವರನ್ನು ಇತ್ತೀಚೆಗೆ ಉಳ್ಳಾಲದಲ್ಲಿ ಬಂಧಿಸಲಾಗಿದೆ. ಈಗ ಸ್ವಾತಂತ್ರ್ಯೋತ್ಸವಕ್ಕೆ ಅಡ್ಡಿಪಡಿಸುವ ಘಟನೆ ನಡೆದಿದೆ. ಕರಾವಳಿಯಲ್ಲಿ ಸಮಾಜಘಾತುಕ ಶಕ್ತಿಗಳು ಬೇರೂರಲು ಪ್ರಯತ್ನಿಸುತ್ತಿವೆ. ರಾಜಕೀಯ ಲಾಭಕ್ಕಾಗಿ ಕೆಲವರು ದೇಶ ವಿರೋಧಿಗಳ ಜತೆ ಕೈ ಜೋಡಿಸುತ್ತಿದ್ದಾರೆ. ಇದಕ್ಕೆ ಬಿಜೆಪಿ ಅವಕಾಶ ನೀಡದು. ದೇಶ ವಿರೋಧಿಗಳು, ಅವರ ಬೆಂಬಲಿಗರನ್ನು ಸರ್ಕಾರ ಮಟ್ಟ ಹಾಕಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.