ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಲಾಭ: ಸಚಿವ ಕೋಟ

ಸ್ವಚ್ಛ ಭಾರತ್ ಮಿಷನ್ ಮಿಷನ್ ಎಂ.ಆರ್. ಎಫ್ ಘಟಕ: ಸಮಾಲೋಚನಾ ಸಭೆ
Last Updated 2 ಜೂನ್ 2021, 3:38 IST
ಅಕ್ಷರ ಗಾತ್ರ

ಮಂಗಳೂರು: ‘ಗ್ರಾಮೀಣ ಭಾಗದಲ್ಲಿ ತ್ಯಾಜ್ಯವನ್ನು ಸಂಗ್ರಹಿಸುವಾಗಲೇ ಹಸಿ ಹಾಗೂ ಒಣ ಎಂದು ಬೇರ್ಪಡಿಸಿ, ಹಸಿಕಸದಿಂದ ವೈಜ್ಞಾನಿಕವಾಗಿ ಗೊಬ್ಬರ ಹಾಗೂ ಒಣ ಕಸದಿಂದ ಮರು ಉತ್ಪಾದನೆಮಾಡುವುದು ಒಳಿತು. ಆರ್ಥಿಕವಾಗಿ ಲಾಭದಾಯಕ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ನೇತ್ರಾವತಿ ಸಭಾಂಗಣದಲ್ಲಿ ಮಂಗಳವಾರ ಸ್ವಚ್ಛ ಭಾರತ್ ಮಿಷನ್ (ಗ್ರಾಮ) ಮಿಷನ್ ಅಡಿ ಎಂ.ಆರ್. ಎಫ್ ಘಟಕ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡುವುದರಿಂದ ಜನರ ಜತೆಗೆ ಪ್ರಾಣಿ ಗಳೂ ಉತ್ತಮ ಆರೋಗ್ಯ ಹೊಂದಲು ಸಹಕಾರಿಯಾಗುತ್ತದೆ ಎಂದರು.

ರಾಜ್ಯದಲ್ಲಿಯೇ ಪ್ರಥಮವಾಗಿ ಬೆಂಗಳೂರಿನ ಗ್ರಾಮೀಣ ಭಾಗದ ಜಿಗಣಿಯಲ್ಲಿ ಒಣ ಕಸ ಪ್ಲಾಸ್ಟಿಕ್, ರಟ್ಟು, ಗಾಜಿನ ಬಾಟಲ್‍ ಮತ್ತಿತರ ವಸ್ತುಗಳ ಮರು ಉತ್ಪಾದನೆ ಮಾಡುವುದರಿಂದ ಒಣ ತ್ಯಾಜ್ಯದಿಂದ ಆರ್ಥಿಕ ಲಾಭ ಆಗಿದೆ ಎಂದರು. ಪೈಲೆಟ್ ಕಾರ್ಯಕ್ರಮವಾಗಿ ರಾಮನಗರ, ಉಡುಪಿ, ಬಳ್ಳಾರಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎಂ.ಆರ್.ಎಫ್. ಘಟಕಗಳನ್ನು ಸ್ಥಾಪನೆಗೆ ಮಂಜೂರಾತಿ ನೀಡಲಾಗಿದೆ. ಜಿಲ್ಲೆಯಲ್ಲಿ ಶೀಘ್ರ ಈ ಕಾರ್ಯವನ್ನು ಪ್ರಾರಂಭಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮಾತನಾಡಿ,‘ ಸರ್ಕಾರ ಯಾವುದೇ ಯೋಜನೆಗಳನ್ನು ತರುವುದು ಜನರ ಉಪಯೋಕ್ಕಾಗಿ ಮಾಡುತ್ತದೆ. ಜನರ ಸಹಕಾರ ಅತ್ಯಗತ್ಯ’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್ ಮಾತನಾಡಿ, ‘ಜಿಲ್ಲೆಯ ಗಂಜೀಮಠದ ಉಳಿಪಾಡಿಯಲ್ಲಿ ಎಂ.ಆರ್.ಎಫ್. ಘಟಕ ಪ್ರಾರಂಭಿಸಲು ಕೆ.ಐ.ಡಿ.ಬಿ 2.04 ಎಕರೆ ಜಮೀನನ್ನು ನೀಡಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯ ಮಂಜೂರಾಗಿದ್ದು, ಟೆಂಡರ್ ಕರೆಯಲಾಗಿದೆ’ ಎಂದರು.

ಈ ಘಟಕದ ಪ್ರಾರಂಭದಿಂದ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸಂಗ್ರಹವಾಗುವ ಒಣ ಕಸವನ್ನು ಮರು ಉತ್ಪಾದನೆ ಮಾಡುವುದರೊಂದಿಗೆ ತ್ಯಾಜ್ಯ ನಿರ್ವಹಣೆಯನ್ನು ಉತ್ತಮ ರೀತಿಯಲ್ಲಿ ಮಾಡಲು ಸಾಧ್ಯವಾಗುತ್ತದೆ ಅಲ್ಲದೇ ಸ್ಥಳೀಯ ಜನರಿಗೆ ಉದ್ಯೋಗ ಲಭಿಸಲಿದೆ ಎಂದರು.

ಶಾಸಕ ಭರತ್ ವೈ. ಶೆಟ್ಟಿ, ರಾಮಕೃಷ್ಣ ಮಿಷನ್‌ನ ಏಕಗಮ್ಯಾನಂದ ಸ್ವಾಮೀಜಿ, ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT