ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಎಂಆರ್‌ಪಿಎಲ್‌ಗೆ ಮೂರು ರಾಷ್ಟ್ರೀಯ ಪ್ರಶಸ್ತಿ

Published 1 ಡಿಸೆಂಬರ್ 2023, 5:11 IST
Last Updated 1 ಡಿಸೆಂಬರ್ 2023, 5:11 IST
ಅಕ್ಷರ ಗಾತ್ರ

ಮಂಗಳೂರು: ಪಬ್ಲಿಕ್ ರಿಲೇಷನ್ಸ್‌ ಸೊಸೈಟಿ ಆಫ್ ಇಂಡಿಯಾ ನೀಡುವ ಮೂರು ರಾಷ್ಟ್ರೀಯ ಪ್ರಶಸ್ತಿಗಳು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ಗೆ (ಎಂಆರ್‌ಪಿಎಲ್‌) ದೊರೆತಿವೆ.

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಇಂಟರ್‌ನ್ಯಾಷನಲ್ ಪಬ್ಲಿಕ್ ರಿಲೇಷನ್ಸ್‌ ಫೆಸ್ಟಿವಲ್‌ನಲ್ಲಿ ಆಸ್ಟ್ರಿಯಾ ರಾಯಭಾರಿ ಕಚೇರಿಯ ಡೆಪ್ಯುಟಿ ಕಮಿಷನರ್ ಬರ್ನಾಡ್ ಆ್ಯಂಡರ್‌ಸನ್, ಇಂಡಿಯಾ ಟುಡೇ ಮಾಧ್ಯಮ ಸಂಸ್ಥೆಯ ಡೀನ್ ದ್ರುಬಾ ಜ್ಯೋತಿಪತಿ, ವಿಶ್ವಸಂಸ್ಥೆಯ ಇಂಧನ ಸಲಹೆಗಾರ ಅಜಿತ್ ಪಾಠಕ್ ಪ್ರಶಸ್ತಿ ಪ್ರದಾನ ಮಾಡಿದರು. ಎಂಆರ್‌ಪಿಎಲ್‌ನ ಪ್ರಧಾನ ವ್ಯವಸ್ಥಾಪಕ (ಕಾರ್ಪೊರೇಟ್ ಸಂಪರ್ಕ ವಿಭಾಗ) ರುಡಾಲ್ಫ್ ನೊರೋನ್ಹ ಪ್ರಶಸ್ತಿ ಸ್ವೀಕರಿಸಿದರು.

ಸಾಮಾಜಿಕ ಮಾಧ್ಯಮದಲ್ಲಿ ಬ್ರ್ಯಾಂಡಿಂಗ್ ಮತ್ತು ಪಿಆರ್‌, ಸಾಮಾಜಿಕ ಹೊಣೆಗಾರಿಕೆಯಡಿ ಮಕ್ಕಳಿಗಾಗಿ ಉತ್ತಮ ಯೋಜನೆ ಅನುಷ್ಠಾನ, ಕೌಶಲ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಎಂಆರ್‌ಪಿಎಲ್‌ನ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT