ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಆರ್‌ಪಿಎಲ್‌: ವಿಜಿಲೆನ್ಸ್ ಜಾಗೃತಿ ಸಪ್ತಾಹ

Last Updated 8 ನವೆಂಬರ್ 2022, 7:32 IST
ಅಕ್ಷರ ಗಾತ್ರ

ಮಂಗಳೂರು: ವಿಜಿಲೆನ್ಸ್ ಜಾಗೃತಿ ಸಪ್ತಾಹದ ಅಂಗವಾಗಿ ಎಂಆರ್‌ಪಿಎಲ್‌, ಮಣೇಲ್ ಶ್ರೀನಿವಾಸ್ ನಾಯಕ್ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್ ಜತೆ ಸೇರಿ, ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

‘ಅಭಿವೃದ್ಧಿ ಹೊಂದಿದ ರಾಷ್ಟ್ರಕ್ಕಾಗಿ ಭ್ರಷ್ಟಾಚಾರ ಮುಕ್ತ ಭಾರತ’ ಘೋಷವಾಕ್ಯದ ಅಡಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಭಾಗವಾಗಿ ನಡೆದ, ಪೋಸ್ಟರ್ ಮೇಕಿಂಗ್, ಬೀದಿ ನಾಟಕ, ಚರ್ಚಾ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಶಾರ್ಟ್ ವಿಡಿಯೊ, ಪ್ರಬಂಧ ಸ್ಪಧೆಗಳಲ್ಲಿ 21 ಪದವಿ ಕಾಲೇಜುಗಳ 192 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಎಂಆರ್‌ಪಿಎಲ್ನ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಎಚ್‌.ವಿ ಪ್ರಸಾದ್ ಭಾಗವಹಿಸಿದ್ದರು. ಮಹಿಳಾ ರಾಷ್ಟ್ರೀಯ ಶಿಕ್ಷಣ ಸೊಸೈಟಿ (ಡಬ್ಲ್ಯುಎನ್‍ಇಎಸ್) ಅಧ್ಯಕ್ಷ ಮಣೇಲ್ ಅಣ್ಣಪ್ಪ ನಾಯಕ್ ಅಧ್ಯಕ್ಷತೆ ವಹಿಸಿದ್ದರು.

ಎಂಎಸ್‍ಎನ್‍ಐಎಂ ನಿರ್ದೇಶಕಿ ಡಾ.ಮೊಲಿ ಎಸ್.ಚೌಧರಿ ಸ್ವಾಗತಿಸಿದರು. ಎಂಆರ್‌ಪಿಎಲ್ ಹಿರಿಯ ವ್ಯವಸ್ಥಾಪಕ (ವಿಜಿಲೆನ್ಸ್) ನೂಪುರ್ ಕೌಶಿಕ್ ಭಲ್ಲಾ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಸಹಾಯಕ ಪ್ರಾಧ್ಯಾಪಕಿ ಚಿತ್ರಾಂಜಲಿ ವಂದಿಸಿದರು. ಸಹಾಯಕ ಪ್ರಾಧ್ಯಾಪಕಿ ನಂದಿತಾ ಸುನಿಲ್ ಕಾರ್ಯಕ್ರಮ ನಿರೂಪಿಸಿದರು.

ಸಮಾರೋಪ ಕಾರ್ಯಕ್ರಮದಲ್ಲಿ ಎಂಆರ್‌ಪಿಎಲ್ ಸಮೂಹದ ಪ್ರಧಾನ ವ್ಯವಸ್ಥಾಪಕ ಕೃಷ್ಣ ಹೆಗಡೆ, ಡಬ್ಲ್ಯುಎನ್‍ಇಎಸ್ ಕಾರ್ಯದರ್ಶಿ ಜೀವಂದಾಸ್ ನಾರಾಯಣ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT