ಸಿದ್ದ ರಾಮಯ್ಯ ಅವರು ಅವರು ತಾವೇನೂ ಮಾಡಿಲ್ಲ ಎಂದು ಹೇಳಿದ್ದಾರೆ. ಆದರೆ ಈಗ ಆರೋಪಗಳಿಗೆ ಸಂಬಂಧಿಸಿ ಪುರಾವೆಗಳು ಇವೆ ಎಂದು ಹೈಕೋರ್ಟ್ ಹೇಳಿದೆ. ಪ್ರಕರಣದ ತನಿಖೆ ಮಾಡುವ ಏಜೆನ್ಸಿ ಯಾವ ನಿರ್ಣಯಕ್ಕೆ ಬರುತ್ತವೆ ಎಂಬುದರ ಮೇಲೆ ಪ್ರಕರಣ ಅಂತ್ಯ ಕಾಣುತ್ತದೆ. ಅದು ಆಮೇಲಿನ ವಿಷಯ. ಆದರೆ ಸದ್ಯ ಗಂಭೀರವಾದ ಆರೋಪ ಬಂದ ಹಿನ್ನೆಲೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಅವರು ಹೇಳಿದರು.