ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಭ್ರಷ್ಟಾಚಾರದ ತನಿಖೆ: ಲೋಕಾಯುಕ್ತ ಎಸ್‌ಪಿ

Published 16 ಮಾರ್ಚ್ 2024, 2:47 IST
Last Updated 16 ಮಾರ್ಚ್ 2024, 2:47 IST
ಅಕ್ಷರ ಗಾತ್ರ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಸಾರ್ವಜನಿಕರ ಕಡತಗಳು ವಿಲೇವಾರಿ ಆಗುತ್ತಿಲ್ಲ ಮತ್ತು ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್‌ ಅಧಿಕಾರಿಗಳು 18 ತಾಸು ಕಚೇರಿಯಲ್ಲಿ ಪರಿಶೀಲನೆ ನಡೆಸಿದರು.

ಬುಧವಾರ ಸಂಜೆ ದಿಢೀರ್ ಭೇಟಿ ನೀಡಿದ ಲೋಕಾಯುಕ್ತ ಪೊಲೀಸ್‌ ಅಧಿಕಾರಿಗಳು, ಕಚೇರಿಯಲ್ಲಿ ಪರಿಶೀಲನೆ ನಡೆಸಿದಾಗ, ಅಲ್ಲಿರುವ ಅಧಿಕಾರಿಗಳು, ಕೆಲವು ವ್ಯಕ್ತಿಗಳ ಬಳಿ ದೊಡ್ಡ ಪ್ರಮಾಣದಲ್ಲಿ ಹಣ ಇರುವುದು ಕಂಡುಬಂದಿದೆ. ಹಣದ ಬ್ಯಾಗ್‌ ಬಗ್ಗೆ ಕೇಳಿದಾಗ ಸರಿಯಾದ ಉತ್ತರ ಸಿಕ್ಕಿಲ್ಲ. ಸಾರ್ವಜನಿಕರು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಅಧಿಕಾರಿಗಳು ನೀಡುವ ಕಿರುಕುಳದ ಕುರಿತು ಹೇಳಿಕೊಂಡಿದ್ದಾರೆ. ದೀರ್ಘಕಾಲದಿಂದ ವಿಲೇವಾರಿ ಆಗದ ಹಲವಾರು ಕಡತಗಳು ಸಿಕ್ಕಿವೆ. ಅಧಿಕಾರಿಗಳು ದಲ್ಲಾಳಿಗಳೊಡನೆ ದೂರವಾಣಿ ಮೂಲಕ ಹೊಂದಾಣಿಕೆ ಮಾಡಿಕೊಂಡು ಕಡತ ವಿಲೇವಾರಿ ಮಾಡುತ್ತಿರುವುದಕ್ಕೆ ಸಾಕ್ಷ್ಯಗಳು ದೊರೆತಿವೆ. ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಎಸ್‌ಪಿ ಕಚೇರಿಯ ಪ್ರಕಟಣೆ ತಿಳಿಸಿದೆ.

ಲೋಕಾಯುಕ್ತ ಮಂಗಳೂರಿನ ಎಸ್ಪಿ ಸಿ.ಎ.ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿಗಳಾದ ಚಲುವರಾಜು ಬಿ, ಗಾನ ಪಿ.ಕುಮಾರ್, ಇನ್‌ಸ್ಪೆಕ್ಟರ್‌ಗಳಾದ ಅಮಾನುಲ್ಲಾ ಎ, ಸುರೇಶ್‌ಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT