ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ಅಧ್ಯಕ್ಷರಂತೆ ಕೆಲಸ‌ ಮಾಡುತ್ತಿರುವ ರಾಜ್ಯಪಾಲರು: ಬಿ.ಕೆ ಹರಿಪ್ರಸಾದ್ ಆರೋಪ

Published : 20 ಆಗಸ್ಟ್ 2024, 8:23 IST
Last Updated : 20 ಆಗಸ್ಟ್ 2024, 8:23 IST
ಫಾಲೋ ಮಾಡಿ
Comments

ಮಂಗಳೂರು: ಪ್ರಸ್ತುತ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ರಾಜ್ಯಪಾಲರು ಬಿಜೆಪಿ ಅಧ್ಯಕ್ಷರಂತೆ ಕೆಲಸ ಮಾಡುತ್ತಿದ್ದಾರೆ ಅನ್ನಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಹೇಳಿದರು.

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ರಾಜ ಭವನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಂವಿಧಾನದ ಚೌಕಟ್ಟಿನಲ್ಲಿರುವ ರಾಜ್ಯಪಾಲ ಹುದ್ದೆಯಲ್ಲಿರುವವರು, ತಮ್ಮ ಚೌಕಟ್ಟನ್ನು ಬಿಟ್ಟು ಬಿಜೆಪಿ ನಿರ್ದೇಶನದಂತೆ ಕೆಲಸ ಮಾಡಲು ಆಗುವುದಿಲ್ಲ ಎಂದರು‌.

ಈ ಹಿಂದೆ ಬಿಜೆಪಿ ಆಪರೇಷನ್ ಕಮಲದ ಮೂಲಕ ಸರ್ಕಾರ ಕೆಡವಿತ್ತು. ಈಗ ಇನ್ನೊಂದು ರೀತಿಯ ವಾಮಮಾರ್ಗದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ.‌ ಸಿದ್ದರಾಮಯ್ಯ ಮೇಲೆ ಮಾಡುತ್ತಿರುವ ಆರೋಪ ಕಪೋಲಕಲ್ಪಿತವಾಗಿದೆ ಎಂದರು.

ರಾಜ್ಯಪಾಲರು ಹಿಂದೆ ರಾಜಕಾರಣಿ ಆಗಿದ್ದವರು, ಅವರನ್ನು ನಾನು ಹತ್ತಿರದಿಂದ ಬಲ್ಲೆ. ಬಿಜೆಪಿಯವರಿಗೆ ದಲಿತರ ಮೇಲೆ ಪ್ರೀತಿ ಇದ್ದರೆ ಸಂವಿಧಾನ ಬದಲಾವಣೆ ಬಗ್ಗೆ ಯಾಕೆ ಮಾತನಾಡುತ್ತಿದ್ದರು? ಸಾಂವಿಧಾನಿಕ ಹುದ್ದೆಯಲ್ಲಿದ್ದವರ ಬಗ್ಗೆ ನಾವು ಮಾತನಾಡುವುದು ಸರಿಯಲ್ಲ, ಕಾನೂನು ಹೋರಾಟ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT