ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

CM ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಸರ್ಕಾರ ಅಭದ್ರಗೊಳಿಸುವ ಷಡ್ಯಂತ್ರ

Published 17 ಆಗಸ್ಟ್ 2024, 14:02 IST
Last Updated 17 ಆಗಸ್ಟ್ 2024, 14:02 IST
ಅಕ್ಷರ ಗಾತ್ರ

ನರಸಿಂಹರಾಜಪುರ: ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಪ್ರಶಾಂತ್ ಎಲ್.ಶೆಟ್ಟಿ ಆರೋಪಿಸಿದ್ದಾರೆ.

ಶನಿವಾರ ಹೇಳಿಕೆ ನೀಡಿರುವ ಅವರು ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲವು ಮುಖಂಡರು ಸರ್ಕಾರ ಅಭದ್ರಗೊಳಿಸುವ ಪ್ರಯತ್ನದಲ್ಲಿ ಭಾಗಿಯಾಗಿದ್ದಾರೆ. ಉತ್ತರಾಖಂಡ, ಜಾರ್ಖಂಡ್ ಹಾಗೂ ನವದೆಹಲಿಯಲ್ಲಿ ಇಂಥ ಷಡ್ಯಂತ್ರ ನಡೆದಿದೆ ಎಂದು ದೂರಿದ್ದಾರೆ.

ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಕೆಲವರಿಗೆ ಸಹಿಸಲಾಗುತ್ತಿಲ್ಲ. ಎಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ ವಿರುದ್ಧ ದೂರು ನೀಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದರೂ ರಾಜ್ಯಪಾಲರು ಕ್ರಮಕ್ಕೆ ಮುಂದಾಗಲಿಲ್ಲ ಎಂದು ದೂರಿರು ಅವರು ಸಿದ್ದರಾಮಯ್ಯ ಅವರ ಪರ ರಾಜ್ಯದ ಜನ ಇದ್ದಾರೆ. ಅವರನ್ನು ಕುತಂತ್ರದಿಂದ ಕೆಳಗಿಳಿಸಲು ಪ್ರಯತ್ನಿಸಿದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT