ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಹಗರಣ: ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹ

Published : 25 ಸೆಪ್ಟೆಂಬರ್ 2024, 13:49 IST
Last Updated : 25 ಸೆಪ್ಟೆಂಬರ್ 2024, 13:49 IST
ಫಾಲೋ ಮಾಡಿ
Comments

ಮೂಲ್ಕಿ:ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಹೈಕೋರ್ಟ್‌ ಅನುಮತಿ ನೀಡಿರುವುದರಿಂದ, ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕು, ಸರ್ಕಾರವನ್ನು ಬರ್ಖಾಸ್ತು ಮಾಡಬೇಕು, ಹಗರಣದ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು’ ಎಂದು ಶಾಸಕ ಉಮಾನಾಥ ಕೋಟ್ಯಾನ್ ಆಗ್ರಹಿಸಿದರು.

ಕಿನ್ನಿಗೋಳಿಯಲ್ಲಿ ಮೂಲ್ಕಿ - ಮೂಡುಬಿದಿರೆ ಬಿಜೆಪಿ ಮಂಡಲ ಘಟಕದಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಗೆ ಪರಿಶಿಷ್ಟ ಜಾತಿ ಹಾಗೂ ಪಂಗಡದ ₹25 ಕೋಟಿ  ಹಾಗೂ ವಾಲ್ಮೀಕಿ ನಿಗದ ₹180 ಕೋಟಿ ದುರುಪಯೋಗ ಮಾಡಿಕೊಂಡಿರುವ ಬಗ್ಗೆ ತನಿಖೆ ನಡೆಯುತ್ತಿದೆ. ಮುಖ್ಯಮಂತ್ರಿ ಅಧಿಕಾರದಲ್ಲಿ ಮುಂದುವರಿಯಲು ಅರ್ಹರಲ್ಲ. ನೈತಿಕತೆ ಇದ್ದರೆ ರಾಜಿನಾಮೆ ಕೊಡಿ ಎಂದು ಘೋಷಣೆ ಕೂಗಲಾಯಿತು.

ಬಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಸುನಿಲ್ ಆಳ್ವ, ಮಂಡಲ ಘಟಕದ ಅಧ್ಯಕ್ಷ ದಿನೇಶ್ ಪುತ್ರನ್, ಪ್ರಮುಖರಾದ ಭುವನಾಭಿರಾಮ ಉಡುಪ, ಕಸ್ತೂರಿ ಪಂಜ, ಶಾಂತಿಪ್ರಸಾದ್ ಹೆಗ್ಡೆ, ಸತೀಶ್ ಅಂಚನ್, ಶೈಲೇಶ್‌ಕುಮಾರ್, ರಂಜಿತ್ ಸುವರ್ಣ, ನವೀನ್ರಾಜ್ ಬಪ್ಪನಾಡು, ಈಶ್ವರ ಕಟೀಲು, ಕೇಶವ ಕರ್ಕೇರ, ಅಭಿಲಾಷ್ ಶೆಟ್ಟಿ, ವಿಠಲ್ ಮೂಲ್ಕಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT