ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಿಪು: ನಂದರಪಡ್ಪು ರಸ್ತೆ ಅಭಿವೃದ್ಧಿ ಕಾಮಕಾರಿಗೆ ಚಾಲನೆ

Last Updated 3 ಫೆಬ್ರುವರಿ 2023, 5:30 IST
ಅಕ್ಷರ ಗಾತ್ರ

ಮುಡಿಪು: ಬಾಳೆಪುಣಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದರಪಡ್ಪು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ ಈಚೆಗೆ ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ನಂದರಪಡ್ಪು ರಸ್ತೆಯು ಕೇರಳಕ್ಕೆ ಸಂಪರ್ಕಿಸುವ ರಸ್ತೆಯಾಗಿದ್ದು, ಮುಖ್ಯವಾಗಿ ಪೊಯ್ಯತ್ತಬೈಲ್ ದರ್ಗಾ, ಉಳ್ಳಾಲ್ತಿ ಕ್ಷೇತ್ರವನ್ನು ಸಂಪರ್ಕಿಸುತ್ತದೆ. ಹಲವಾರು ವರ್ಷಗಳಿಂದ ಈ ರಸ್ತೆಯು ಹದಗೆಟ್ಟು ಜನರಿಗೆ ತೊಂದರೆಯಾಗಿತ್ತು. ಇದೀಗ ಶಾಸಕ ಯು.ಟಿ.ಖಾದರ್ ಅವರು ಮುತುವರ್ಜಿ ವಹಿಸಿ ರಸ್ತೆ ಅಭಿವೃದ್ಧಿಗೆ ಅನುದಾನವನ್ನು ಒದಗಿಸಿದ್ದಾರೆ ಎಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ನಾಸೀರ್ ನಡುಪದವು, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ‌ ಹೈದರ್ ಕೈರಂಗಳ, ಬಾಳೆಪುಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಝೀಯಾ, ಮುಖಂಡರಾದ ಅರುಣ್ ಡಿಸೋಜ, ಸಿ.ಎಂ.ಶರೀಫ್, ಅಬ್ದುಲ್ ರಹಿಮಾನ್ ಇದ್ದರು.

ಹೂಹಾಕುವ ಕಲ್ಲಿನಿಂದ ಕೊಪ್ಪಲಕ್ಕೆ ಹೋಗುವ ರಸ್ತೆ, ಬಂಗಾರುಗುಡ್ಡೆ ಪರಿಶಿಷ್ಟ ಕಾಲೊನಿಯ ರಸ್ತೆ ಕಾಂಕ್ರೀಟೀಕರಣ ಕಾಮಗಾಋಇಗೆ ಇದೇ ವೇಳೆ ಶಿಲಾನ್ಯಾಸ ನೆರವೇರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT