ಮೂಲ್ಕಿ: ಬಪ್ಪನಾಡು ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ ಮಾಡಲಾಗಿದೆ. ಸಂಪ್ರದಾಯದ ಬಲಿ ಉತ್ಸವ ಆರಂಭಗೊಂಡಿದೆ. ಸೀಮೆಯ ಭಕ್ತರ ಸಹಕಾರದಿಂದ ಜಾತ್ರೆ ಸಸೂತ್ರವಾಗಿ ನಡೆಯಲಿದೆ ಎಂದು ದೇವಳದ ಆನುವಂಶಿಕ ಮೊಕ್ತೇಸರ ಎಂ. ದುಗ್ಗಣ್ಣ ಸಾವಂತರು ಹೇಳಿದರು.

ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ ನಡೆದ ಪ್ರಮುಖರ ಸಭೆಯಲ್ಲಿ ಅವರು ಮಾಹಿತಿ ನೀಡಿದರು.

ಸೀಮೆಯ ಒಂಬತ್ತು ಮಾಗಣೆಯ ಭಕ್ತರಿಂದ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ಮಾರ್ಚ್ 31ರಂದು ಸಂಜೆ ಮೂಲ್ಕಿ ಬಸ್ ನಿಲ್ದಾಣದ ಬಳಿಯ ಶಿವಾಜಿ ಮಂಟಪದಿಂದ ಸಮರ್ಪಣೆಯಾಗಲಿದೆ. ಏ.1ರಿಂದ 8ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ ಎಂದರು.

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ ಮಾತನಾಡಿ, ಜಾತ್ರಾ ಮಹೋತ್ಸವದಲ್ಲಿ ವಿವಿಧ ಸಂಘ-ಸಂಸ್ಥೆಗಳು ಸಹಕರಿಸಲು ಮುಂದಾಗಿವೆ. ಸ್ವಯಂ ಸೇವಕರಾಗಿ ಹಲವರು ವಿವಿಧ ಜವಾಬ್ದಾರಿ ನಿಭಾಯಿಸಲಿದ್ದಾರೆ ಎಂದರು.

ದೇವಸ್ಥಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಮಾರ್ಚ್ 28ರಂದು ಬೆಳಿಗ್ಗೆ 10.30ಕ್ಕೆ ಪೊಲೀಸರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಯಿತು.

ಮೂಲ್ಕಿ ಬಿಲ್ಲವರ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್ ನಡಿಕುದ್ರು, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಅಭಿವೃದ್ಧಿ ಸಮಿತಿಯ ಸುನಿಲ್ ಆಳ್ವ, ಕಿರಣ್ ಕುಮಾರ್ ಶೆಟ್ಟಿ ಕೋಲ್ನಾಡು ಗುತ್ತು, ಹರಿಶ್ಚಂದ್ರ ಪಿ. ಸಾಲ್ಯಾನ್, ವಿನೋದ್ ಸಾಲ್ಯಾನ್ ಬೆಳ್ಳಾಯರು, ಕೃಷ್ಣ ಶೆಟ್ಟಿ, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ, ಕಾರು ಚಾಲಕ- ಮಾಲೀಕರ ಸಂಘದ ಅಧ್ಯಕ್ಷ ರಾಜೇಶ್ ಕೆರೆಕಾಡು, ದೇವಳದ ಶಿವಶಂಕರ್, ಕಾರ್ತಿಕ್ ಕೋಟ್ಯಾನ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-29-1306384531

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.