ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಡಾಲ ಸಮ್ಮಿಲನ 24ಕ್ಕೆ

Published 22 ಡಿಸೆಂಬರ್ 2023, 4:09 IST
Last Updated 22 ಡಿಸೆಂಬರ್ 2023, 4:09 IST
ಅಕ್ಷರ ಗಾತ್ರ

ಮಂಗಳೂರು: ಅಖಿಲ ಭಾರತ ಮುಂಡಾಲ ಯುವ ವೇದಿಕೆ ಆಶ್ರಯದಲ್ಲಿ 14ನೇ ವರ್ಷದ ಮುಂಡಾಲ ಸಮ್ಮಿಲನ ಕಾರ್ಯಕ್ರಮವು ಡಿ.24ರಂದು ಮಧ್ಯಾಹ್ನ 2 ಗಂಟೆಯಿಂದ ಉರ್ವಸ್ಟೋರ್‌ನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ವೇದಿಕೆಯ ಅಧ್ಯಕ್ಷ ಪ್ರಶಾಂತ್ ಕಾಟಿಪಳ್ಳ ಹೇಳಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಧ್ಯಾಹ್ನ 2 ಗಂಟೆಯಿಂದ ‘ಐಲೇಸ’ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆ ನಡೆಯಲಿದೆ. ಸಂಜೆ 5 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ಕಚ್ಚೂರು ಮಾಲ್ತಿದೇವಿ ದೇವಸ್ಥಾನದ ಬಬ್ಬುಸ್ವಾಮಿ ಮೂಲಕ್ಷೇತ್ರ ಬಾರಕೂರು ಉಡುಪಿಯ ಅಧ್ಯಕ್ಷ ಶಿವಪ್ಪ ನಂತೂರು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಭಾಗವಹಿಸುವರು’ ಎಂದರು.

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅಧಿಕ ಅಂಕಗಳಿಸಿದ ಮುಂಡಾಲ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಅಭಿನಂದನೆ, 2024ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ, ಗ್ರಾಮೀಣ ಕ್ರೀಡಾಕೂಟದ ಬಹುಮಾನ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದು ಹೇಳಿದರು.

ಪ್ರಮುಖರಾದ ರಘುರಾಜ್ ಕದ್ರಿ, ಕಿರಣ್ ಕುಮಾರ್ ಕೊಡಿಯಾಲಬೈಲ್, ವಿನಯನೇತ್ರ ದಡ್ಡಲಕಾಡ್, ಬಾಲಚಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT