ಮಂಗಳೂರು: ನಗರದಲ್ಲಿ ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಕೇರಳದ ಉದ್ಯಮಿಯೊಬ್ಬರನ್ನು ನಗರದ ಕಾವೂರಿನಲ್ಲಿ ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ್ದಾರೆ.

ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (60) ಕೊಲೆಯಾದ ವ್ಯಕ್ತಿ. ಮಲ್ಲಿ ಲೇಔಟ್‌ನಲ್ಲೇ ಸ್ವಂತ ಮನೆಯಲ್ಲಿ ಪತ್ನಿ ಜತೆ ವಾಸಿಸುತ್ತಿದ್ದರು. ಮಂಗಳವಾರ ಸುರೇಂದ್ರನ್ ನಗರಕ್ಕೆ ಹೋಗಿದ್ದು, ಅವರ ಪತ್ನಿ ಫಾರ್ಮ್ ಉದ್ಯಮ ವ್ಯವಹಾರ ನೋಡಿಕೊಳ್ಳಲು ತೆರಳಿದ್ದರು. ಮಧ್ಯಾಹ್ನ 1 ಗಂಟೆ ವೇಳೆಗೆ ಸುರೇಂದ್ರನ್ ಅವರು ಮನೆಗೆ ಮರಳಿ ಬಂದಿದ್ದು, ಆ ಬಳಿಕ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಸುರೇಂದ್ರನ್ ಅವರ ಪತ್ನಿ ಸಂಜೆ ಮನೆಗೆ ಬಂದಾಗ ಮನೆ ಸುತ್ತ ಜನ ಸೇರಿದ್ದರು. ಪತಿ ಕೊಲೆಯಾದ ವಿಷಯ ಅವರಿಗೆ ತಿಳಿದಿರಲಿಲ್ಲ. ಘಟನೆ ತಿಳಿಯುತ್ತಿದ್ದಂತೆ ಆಘಾತಕ್ಕೊಳಗಾಗಿದ್ದರು ಎನ್ನಲಾಗಿದೆ. ಸುರೇಂದ್ರನ್ ಕೊಲೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.