ಮಂಗಳೂರು: ಕ್ಯಾಬ್ ಚಾಲಕನಿಗೆ ಕರೆ ಮಾಡಿ ‘ಮುಸ್ಲಿಂ ಟೆರರಿಸ್ಟ್’ ಎಂದು ಅವಹೇಳನ ಮಾಡಿದ ಬಗ್ಗೆ ಕೇರಳದ ಸಂತೋಷ್ ಅಬ್ರಾಹಂ, ಜಯಕೃಷ್ಣನ್ ಮತ್ತು ವಿಮಲ್ ವಿರುದ್ಧ ಇಲ್ಲಿನ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನಗರಕ್ಕೆ ಬಂದಿದ್ದ ಗುರುವಾರ ರಾತ್ರಿ ಬಂದಿದ್ದ ಮೂವರು ಉಬರ್ ಮತ್ತು ರ್ಯಾಪಿಡೊ ಕ್ಯಾಪ್ಟನ್ ಆ್ಯಪ್ ಮೂಲಕ ಕ್ಯಾಬ್ ಬುಕ್ ಮಾಡಿದ್ದರು. ವಾಹನ ಹತ್ತುವ ಸ್ಥಳವನ್ನು ಬಿಜೈ ನ್ಯೂ ರೋಡ್ ಎಂದು ನಮೂದಿಸಿದ್ದರು. ನಾನು ಆ್ಯಪ್ ಮೂಲಕ ಕಾಲ್ ಮಾಡಿ ಪಿಕ್ ಆಪ್ ಬಗ್ಗೆ ವಿಚಾರಿಸಿದ್ದೆ. ಆಗ ಹಿಂದಿ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿಯು ನನಗೆ ‘ಮುಸ್ಲಿಂ ಉಗ್ರವಾದಿ, ಟೆರರಿಸ್ಟ್’ ಎಂದು ಅಪಹಾಸ್ಯವಾಗಿ ಮಾತನಾಡಿದ್ದ. ಅಲ್ಲದೇ ಹಿಂದಿ ಹಾಗೂ ಮಲಯಾಳ ಭಾಷೆಯಲ್ಲಿ ನನ್ನ ತಾಯಿಗೆ ಅವಾಚ್ಯವಾಗಿ ಬೈದಿದ್ದ’ ಎಂದು ಆರೋಪಿಸಿ ಕ್ಯಾಬ್ ಚಾಲಕ ಅಹ್ಮದ್ ಶಫೀಕ್ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 352 (ಸಾರ್ವಜನಿಕ ಶಾಂತಿ ಭಂಗಪಡಿಸುವ ಅಥವಾ ಅಪರಾಧ ಕೃತ್ಯಕ್ಕೆ ಪ್ರಚೋದಿಸಲು ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಹಾಗೂ 353(2) (ಧರ್ಮ, ಜನಾಂಗ ಅಥವಾ ಜಾತಿ ಆಧಾರದ ಮೇಲೆ ಸುಳ್ಳು ಮಾಹಿತಿ, ವದಂತಿ ಅಥವಾ ಆತಂಕಕಾರಿ ಸುದ್ದಿ ಹರಡುವುದು) ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳಲ್ಲಿ ಜಯಕೃಷ್ಣನ್ ಮಾಲಯಾಳ ನಟ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.