ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕ್ಕಿಲರ ‘ಎಣ್ಣೆ ಬತ್ತಿದ ಲಾಟೀನು’ ಕೃತಿಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

Last Updated 17 ಅಕ್ಟೋಬರ್ 2019, 14:00 IST
ಅಕ್ಷರ ಗಾತ್ರ

ಮಂಗಳೂರು: ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2017ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಬರಹಗಾರ, ಪತ್ರಕರ್ತ ಎ.ಕೆ. ಕುಕ್ಕಿಲ ಅವರ ‘ಎಣ್ಣೆ ಬತ್ತಿದ ಲಾಟೀನು’ (ಪ್ರವಾಸ ಕಥನ) ಕೃತಿ ಆಯ್ಕೆಯಾಗಿದೆ.

ಎ.ಕೆ. ಕುಕ್ಕಿಲ ಅವರು ಕಥೆಗಾರ, ಸೃಜನಶೀಲ ಬರಹಗಾರ ಹಾಗೂ ವಿಮರ್ಶಕರಾಗಿ ಗುರುತಿಸಿಕೊಂಡವರು. ‘ದಾಯಿರ (ಕಥಾ ಸಂಕಲನ), ‘ಜಾಗತೀಕರಣ ಮತ್ತು ಸಂಸ್ಕೃತಿ (ವೈಚಾರಿಕ ಕೃತಿ), ‘ಚಾಟಿಯೇಟು’ (ಸನ್ಮಾರ್ಗ ಸಂಪಾದಕೀಯ ಸಂಗ್ರಹ), ‘ಮದ್ಯಪಾನ: ಪರ, ವಿರೋಧ ಮತ್ತು ನಿಜ’ (ವೈಚಾರಿಕ ಕೃತಿ) ಮತ್ತು ‘ಸರಸ ಸಲ್ಲಾಪ’ (ಲಿಲಿತ ಪ್ರಬಂಧ) ಎ.ಕೆ. ಕುಕ್ಕಿಲರ ಇತರ ಪ್ರಕಟಿತ ಕೃತಿಗಳು. ಇವರ ‘ದಾಯಿರ’ ಕೃತಿಯು 2003ನೇ ಸಾಲಿನ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಯನ್ನು ತನ್ನದಾಗಿಸಿಕೊಂಡಿದೆ.

ಪ್ರಶಸ್ತಿಯು ₹10ಸಾವಿರ ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದ್ದು, ನವೆಂಬರ್ 22ರಂದು ನಗರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪತ್ರಕರ್ತರಾದ ಬಿ.ಎಂ. ಹನೀಫ್, ಬಿ.ಎಂ. ಬಶೀರ್ ಹಾಗೂ ಬರಹಗಾರ ಅಬ್ದುಲ್ ರಹಿಮಾನ್ ಕುತ್ತೆತ್ತೂರು ತೀರ್ಪುಗಾರರಾಗಿ ಸಹಕರಿಸಿದ್ದರು ಎಂದು ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT